ಬೆಂಗಳೂರು : ಬೆಂಗಳೂರು ಕಾಲ್ತುಳಿತ ದುರಂತ ನಡೆದು 3 ತಿಂಗಳ ಬಳಿಕ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಭಾವುಕ ಸಂದೇಶ ರವಾನಿಸಿದ್ದಾರೆ. ಈ ಕುರಿತು ಆರ್ ಸಿಬಿ ಯ ಎಕ್ಸ್ ಖಾತೆಯಲ್ಲಿ ಕೊಹ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
“. ಜೂನ್ 4 ರ ದಿನ ಅತ್ಯಂತ ಸಂತೋಷ ದಿನವಾಗಬೇಕಿತ್ತು. ಆದರೆ ಅಂದು ನಡೆದ ದುರಂತ ನಮ್ಮ ಹೃದಯವನ್ನು ಒಡೆದಿದೆ. ನಮ್ಮ ಫ್ರಾಂಚೈಸಿಯ ಇತಿಹಾಸದಲ್ಲಿ ಅತ್ಯಂತ ಸಂತೋಷದಾಯಕ ಕ್ಷಣವಾಗಿರಬೇಕಾಗಿತ್ತು… ದುರಂತವಾಗಿ ಮಾರ್ಪಟ್ಟಿದೆ. ನಾವು ಕಳೆದುಕೊಂಡವರ ಕುಟುಂಬಗಳಿಗಾಗಿ ಮತ್ತು ಗಾಯಗೊಂಡ ನಮ್ಮ ಅಭಿಮಾನಿಗಳಿಗಾಗಿ ನಾನು ಯೋಚಿಸುತ್ತಿದ್ದೇನೆ ಮತ್ತು ಪ್ರಾರ್ಥಿಸುತ್ತಿದ್ದೇನೆ. ನಿಮ್ಮ ನಷ್ಟವು ಈಗ ನಮ್ಮ ಕಥೆಯ ಭಾಗವಾಗಿದೆ. ಒಟ್ಟಾಗಿ, ನಾವು ಕಾಳಜಿ, ಗೌರವ ಮತ್ತು ಜವಾಬ್ದಾರಿಯೊಂದಿಗೆ ಮುಂದುವರಿಯುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ ಸಿ ಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದರು. ಹಾಗೂ ಹಲವರು ಗಂಭೀರವಾಗಿ ಗಾಯಗೊಂಡಿದ್ದರು. ಈ ಘಟನೆ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.

