HomeLatest NewsBREAKING: 70 ಸಾವಿರ ಲಂಚ ಸ್ವೀಕರಿಸುತ್ತಿದ್ದ ಪೊಲೀಸ್ ‘ಲೋಕಾ’ ಬಲೆಗೆ ಬೀಳ್ತಿದ್ದಂತೆ ಪರಾರಿಯಾದ ಪಿಎಸ್ಐ

BREAKING: 70 ಸಾವಿರ ಲಂಚ ಸ್ವೀಕರಿಸುತ್ತಿದ್ದ ಪೊಲೀಸ್ ‘ಲೋಕಾ’ ಬಲೆಗೆ ಬೀಳ್ತಿದ್ದಂತೆ ಪರಾರಿಯಾದ ಪಿಎಸ್ಐ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಠಾಣೆಯ ಕಾನ್ಸ್ಟೇಬಲ್ ಅಂಬರೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

70 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಅಂಬರೀಶ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನೊಂದ ಯುವತಿ ಕಡೆಯವರ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ನಡೆಸಲಾಗಿದೆ.

ನೊಂದ ಯುವತಿಯ ಕಡೆಯವರ ಬಳಿ ಪಿಎಸ್ಐ ಜಗದೇವಿ 75 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿಂದೆ 5000 ರೂ. ಪಡೆದುಕೊಂಡಿದ್ದರು. ಇಂದು ಜಗದೇವಿ ಪರವಾಗಿ ಅಂಬರೀಶ್ 70 ಸಾವಿರ ರೂ. ಪಡೆಯುವಾಗ ದಾಳಿ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂಬರೀಶ್ ಬಲೆಗೆ ಬೀಳುತ್ತಿದ್ದಂತೆ ಪಿಎಸ್ಐ ಜಗದೇವಿ ಮತ್ತು ಪಿಸಿ ಮಂಜುನಾಥ ಪರಾರಿಯಾಗಿದ್ದಾರೆ. ಪಿಸಿ ಅಂಬರೀಶ್ ನನ್ನು ಪೊಲೀಸರು ವಶಕ್ಕೆ ಪಡೆದು ದೇವನಹಳ್ಳಿ ಠಾಣೆಯಲ್ಲಿ ವಿಚಾರಣೆ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular