HomeLatest NewsBREAKING NEWS: ಮುಡಾ ಕೇಸ್ ನಲ್ಲಿ ಸಿದ್ಧರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್ ವರದಿ ಅಂಗೀಕಾರ: ಡಿಕೆ...

BREAKING NEWS: ಮುಡಾ ಕೇಸ್ ನಲ್ಲಿ ಸಿದ್ಧರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್ ವರದಿ ಅಂಗೀಕಾರ: ಡಿಕೆ ಬೆಂಬಲಿಗರ ಕ್ರಿಮಿನಲ್ ಕೇಸ್ ವಾಪಸ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಲಾಗಿದೆ. ಪಿಎನ್.  ದೇಸಾಯಿ ವಿಚಾರಣಾ ಆಯೋಗ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿತ್ತು.

ಪ್ರಕರಣದ ತನಿಖೆಗೆ ಏಕ ಸದಸ್ಯ ಆಯೋಗವನ್ನು ಸರ್ಕಾರ ರಚನೆ ಮಾಡಿತ್ತು. ಇಂದು ಕ್ಯಾಬಿನೆಟ್ ನಲ್ಲಿ ಪಿಎಂ ದೇಸಾಯಿ ವರದಿಯನ್ನು ಅಂಗೀಕರಿಸಲಾಗಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಲಾಗಿದೆ.

ಡಿಕೆ ಬೆಂಬಲಿಗರ ಕೇಸ್ ವಾಪಸ್

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಬಲಿಗರ ಪ್ರಕರಣಗಳು ಸೇರಿ ಬೇರೆ ಬೇರೆಯ 62 ಕ್ರಿಮಿನಲ್ ಕೇಸ್ ಗಳನ್ನು ಸಂಪುಟ ಸಭೆ ಹಿಂಪಡೆದುಕೊಂಡಿದೆ. ಡಿ.ಕೆ. ಬೆಂಬಲಿಗರ 11 ಪ್ರಕರಣಗಳನ್ನು ಸಂಪುಟ ಸಭೆ ಕೈಬಿಡಲು ತೀರ್ಮಾನ ಕೈಗೊಂಡಿದೆ. 2019ರಲ್ಲಿ ಡಿಕೆ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ್ದು, ಅವರ ಬಂಧನ ಖಂಡಿಸಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದರು. ಡಿಕೆ ಬೆಂಬಲಿಗರ ವಿರುದ್ಧ ಕೇಸು ದಾಖಲಾಗಿದ್ದು, 11 ಪ್ರಕರಣಗಳಲ್ಲಿ ಡಿಕೆ ಬೆಂಬಲಿಗರು ಕಾರ್ಯಕರ್ತರು ಸಿಲುಕಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular