HomeLatest NewsBIG NEWS : 'ಪಾರದರ್ಶಕ ಚುನಾವಣೆ'ಯನ್ನು ಧಿಕ್ಕರಿಸುವುದೇ 'ಕಾಂಗ್ರೆಸ್' ನ ಗುರಿಯಾಗಿದೆ : ಬಿ....

BIG NEWS : ‘ಪಾರದರ್ಶಕ ಚುನಾವಣೆ’ಯನ್ನು ಧಿಕ್ಕರಿಸುವುದೇ ‘ಕಾಂಗ್ರೆಸ್’ ನ ಗುರಿಯಾಗಿದೆ : ಬಿ. ವೈ ವಿಜಯೇಂದ್ರ ವಾಗ್ಧಾಳಿ

ಬೆಂಗಳೂರು : ಪಾರದರ್ಶಕ ಚುನಾವಣೆಯನ್ನು ಧಿಕ್ಕರಿಸುವುದೇ ಕಾಂಗ್ರೆಸ್ನ ಅಜೆಂಡಾ ಹಾಗೂ ಗುರಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ,ವೈ ವಿಜಯೇಂದ್ರ ವಾಗ್ಧಾಳಿ ನಡೆಸಿದ್ದಾರೆ.

ಮುಂದಿನ ಚುನಾವಣೆಗಳಲ್ಲಿ (ಸ್ಥಳೀಯ ಸಂಸ್ಥೆಗಳು) EVM ಯಂತ್ರ ಬದಿಗಿಟ್ಟು ಮತ ಪತ್ರ (ಬ್ಯಾಲಟ್ ಪೇಪರ್ ) ಬಳಕೆಗೆ ನಿರ್ಧರಿಸಿರುವ @INCKarnatakaಸರ್ಕಾರದ ಸಂಪುಟದ ತೀರ್ಮಾನ ತಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವುದೇ ಮತಗಳ್ಳತನದಿಂದ ಎಂದು ಸ್ವಯಂ ಪ್ರಾಮಾಣಿಕರಿಸಿಕೊಂಡಂತಿದೆ. ಈ ಹಿನ್ನೆಲೆಯಲ್ಲಿ EVM ಮತಯಂತ್ರ ಬಳಸಿ ರಾಜ್ಯದಲ್ಲಿ 2೦23ರ ಚುನಾವಣೆಯಲ್ಲಿ ಆರಿಸಿ ಬಂದಿರುವ 136 ಕಾಂಗ್ರೆಸ್ ಶಾಸಕರಿಂದ ಮೊದಲು ರಾಜೀನಾಮೆ ಕೊಡಿಸಲಿ, ರಾಜ್ಯದಿಂದ ಆಯ್ಕೆಯಾದ ಒಂಬತ್ತು ಕಾಂಗ್ರೆಸ್ ಲೋಕಸಭಾ ಸದಸ್ಯರಿಂದ ರಾಜೀನಾಮೆ ಕೊಡಿಸಲಿ, ಮತಪತ್ರ ಬಳಸಿ ಮತ್ತೆ ಚುನಾವಣೆಯಿಂದ ಗೆದ್ದು ಬರಲಿ, ಇಲ್ಲದಿದ್ದರೆ ಮತಗಳ್ಳತನದಿಂದ ನಾವು ಆಯ್ಕೆಯಾಗಿ ಅಧಿಕಾರಕ್ಕೆ ಬಂದಿರುವುದು ಎಂದು ಒಪ್ಪಿಕೊಳ್ಳಲಿ.

ದೇಶದಲ್ಲಿ ಅತಿಹೆಚ್ಚು ಅಕ್ರಮ ಮತದಾನ, ಮತಗಳ್ಳತನದ ದೂರುಗಳು, ಚುನಾವಣಾ ದೌರ್ಜನ್ಯದ ಘಟನೆಗಳು, ಚುನಾವಣಾ ಅಕ್ರಮಗಳು ನಡೆದ ಬಗ್ಗೆ ನ್ಯಾಯಾಲಯಗಳಲ್ಲಿ ದೂರುಗಳು ಅತಿ ಹೆಚ್ಚು ದಾಖಲಾಗಿದ್ದರೆ ಅದು ಮತಪತ್ರ ಆಧರಿಸಿ ನಡೆಸಿದ ಚುನಾವಣೆಗಳಲ್ಲಿ , ಅದೂ ಕಾಂಗ್ರೆಸ್ಸಿಗರ ಮೇಲೇ ಹೆಚ್ಚು ಎಂಬುದನ್ನು ಕಾಂಗ್ರೆಸ್ಸಿಗರು ಇತಿಹಾಸದ ಪುಟಗಳನ್ನು ತೆರೆದು ನೋಡಲಿ. ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲು ಕಾರಣವಾಗಿದ್ದು ಅವರು ನಡೆಸಿದ ಮತಗಳ್ಳತನ ಹಾಗೂ ಅಕ್ರಮ ಚುನಾವಣೆಯ ಹಿನ್ನೆಲೆಯಲ್ಲಿ ನ್ಯಾಯಾಲಯ ನೀಡಿದ ತೀರ್ಪಿನಿಂದ ಎಂಬ ಇತಿಹಾಸವನ್ನು ದೇಶದ ಜನ ಮರೆತಿಲ್ಲ. ಮತ ಪತ್ರ ಆಧರಿಸಿದ ಚುನಾವಣೆಗಳಲ್ಲಿ ಅಕ್ರಮ ಹಾಗೂ ಮತಗಳ್ಳತನ ನಡೆಸುವುದರಲ್ಲಿ ನಿಷ್ಣಾತರಾದ ಕಾಂಗ್ರೆಸ್ಸಿಗರು ಚುನಾವಣೆಗಳ ನಿರಂತರ ಸೋಲುಗಳಿಂದ ಮೂಲೆಗುಂಪಾಗುತ್ತಿರುವ ಪರಿಸ್ಥಿತಿಯಿಂದ ಕಂಗೆಟ್ಟು ಹೋಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕಾರಣದಿಂದಾಗಿ ಆಧಾರ ರಹಿತ, ಅಪ್ರಬುದ್ಧ, ವಿತಂಡ ವಾದವನ್ನು ಮುಂದಿಟ್ಟುಕೊಂಡು@RahulGandhiಅವರು ಮತಗಳ್ಳತನದ ಹೆಸರಿನಲ್ಲಿ ಬಾಲಿಶ ವಿವಾದ ಹುಟ್ಟು ಹಾಕಲು ಹೊರಟಿದ್ದಾರೆ, ಇದನ್ನು ಬೆಂಬಲಿಸಲು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ
@INCKarnatakaಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರವನ್ನು ಬಳಸಿ ಚುನಾವಣೆ ನಡೆಸುವುದಾಗಿ ನಿರ್ಣಯ ಕೈಗೊಂಡಿದೆ. ಇಡೀ ದೇಶ, ಜಗತ್ತು ತಂತ್ರಜ್ಞಾನವನ್ನು ಆಧರಿಸಿ ವೇಗವಾಗಿ ನಡೆಯುತ್ತಿದ್ದರೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರ ತಂತ್ರಜ್ಞಾನವನ್ನು ಅಪಮಾನಿಸಿ ಹೆಬ್ಬೆಟ್ಟಿನ ದಿನಗಳನ್ನು ನೆನಪಿಸಲು ಹೊರಟಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರವಿದ್ದ ಅವಧಿಯಲ್ಲಿ ಮತಪತ್ರ ಬಳಸಿ ನಡೆದ ಚುನಾವಣೆಗಳಲ್ಲಿ ಎಷ್ಟು ಅಕ್ರಮ ನಡೆದಿದೆ ಎನ್ನುವುದಕ್ಕೆ ಇವತ್ತಿಗೂ ದಾಖಲೆಗಳಿವೆ.

90ರ ದಶಕದಲ್ಲಿ ದಾವಣಗೆರೆಯಲ್ಲಿ ಜಯಗಳಿಸಿದ್ದ ಲೋಕಸಭಾ ಬಿಜೆಪಿ ಅಭ್ಯರ್ಥಿಯನ್ನು ಮರು ಎಣಿಕೆಯಲ್ಲಿ ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿಯ ನ್ನು ಗೆಲ್ಲಿಸಲಾಯಿತು, ಬಿಜೆಪಿ ಅಭ್ಯರ್ಥಿಯ ಮತ್ರ ಪತ್ರಗಳನ್ನು ಹೇಗೆ ತಿರಸ್ಕೃತಗೊಳಿಸಲಾಯಿತು ಎಂಬುದಕ್ಕೆ ಅಂದು ದಾವಣಗೆರೆಯ ಮತ ಎಣಿಕೆ ಕೇಂದ್ರದ ಶೌಚಾಲಯಗಳಲ್ಲೆಲ್ಲಾ ಬಿಜೆಪಿ ಅಭ್ಯರ್ಥಿಯ ಮತ ಪತ್ರಗಳು ಚೆಲ್ಲಾಡಿರುವುದನ್ನು ಅಂದು ಮಾಧ್ಯಮಗಳು ವರದಿ ಮಾಡಿದ್ದವು. ಮತಪತ್ರಗಳ ಬಳಕೆಯಿಂದ ಚುನಾವಣಾ ಅಕ್ರಮ ಎಸೆಗಬಹುದು, ಮತಗಟ್ಟೆಗಳಲ್ಲಿ ದೌರ್ಜನ್ಯ ಮೆರೆಯಬಹುದು, ಎಗ್ಗಿಲ್ಲದೇ ಕಳ್ಳ ಮತದಾನವನ್ನೂ ಮಾಡಬಹುದು ಎಂಬ ಏಕೈಕ ಕಾರಣಕ್ಕಾಗಿ ಕಾಂಗ್ರೆಸ್ ಮತ ಪತ್ರ ಆಧರಿಸಿದ ಚುನಾವಣೆಯನ್ನು ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಬೆಂಬಲಿಸುತ್ತಿದೆ, ಅದನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಲು ಮೊದಲ ಹೆಜ್ಜೆ ಇಡಲು ಹೊರಟಿದೆ, ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಪಾರದರ್ಶಕ ಚುನಾವಣೆಯನ್ನು ಧಿಕ್ಕರಿಸುವುದೇ ಕಾಂಗ್ರೆಸ್ನ ಅಜೆಂಡಾ ಹಾಗೂ ಗುರಿಯಾಗಿದೆ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular