BIG NEWS: ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡುವ ಮುನ್ನ ಹಣ ಪಡೆದರೆ ವೈದ್ಯರಿಗೆ ಜೈಲುಶಿಕ್ಷೆ

ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡಿರುವ ಗಾಯಾಳುವಿಗೆ ಚಿಕಿತ್ಸೆ ನೀಡುವ ಮುನ್ನ ಹಣ ಪಡೆದರೆ ವೈದ್ಯರಿಗೆ ಜೈಲುಶಿಕ್ಷೆಯಾಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಿದ್ದು, ಅದರಂತೆ ಇಂದು ಅಧಿಕ್ರ‍ಿತವಾಗಿ ಸರ್ಕಾರ ಆದೇಶ ಹೊರಡಿಸಿದೆ.

ಅಪಘಾತದಲ್ಲಿ ಗಾಯಗೊಂಡಿರುವ ಗಾಯಾಳುಗಳಿಗೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಮೊದಲು ಸೂಕ್ತ ಚಿಕಿತ್ಸೆ ನೀಡಬೇಕು. ಗಾಯಾಳುಗಳ ಚಿಕಿತ್ಸೆಗೆ ವಿಳಂಬ ಮಾಡುವಂತಿಲ್ಲ. ಒಂದು ವೇಳೆ ಮುಂಗಡ ಹಣಕ್ಕೆ ಒತ್ತಾಯಿಸಿದರೆ ಜೈಲುಶಿಕ್ಷೆಯಾಗಲಿದೆ.

ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ 2007ರ ನಿಬಂಧನೆ ಅಡಿಯಲ್ಲಿ ರಸ್ತೆ ಅಪಘಾತ ಪ್ರಕರಣಗಳು ಮಾತ್ರವಲ್ಲ ಆಕಸ್ಮಿಕ ಅಥವಾ ಪ್ರೇರಿತ ಬೆಂಕಿ ಅವಘಡಗಳು, ವಿಷಪ್ರಾಶನ, ಕ್ರಿಮಿನಲ್ ಹಲ್ಲೆ ಪ್ರಕರಣಗಳು ಒಳಗೊಂಡಿರುತ್ತವೆ. ಇಂತಹ ಚಿಕಿತ್ಸೆಗಾಗಿ ಗಾಯಾಳು ಆಸ್ಪತ್ರೆಗೆ ಬಂದಾಗ ತಕ್ಷಣ ಅವರಿಗೆ ಚಿಕಿತ್ಸೆ ನೀಡಬು. ಯಾವ ಕಾರಣಕ್ಕೂ ಚಿಕಿತ್ಸೆ ವಿಳಮ್ಬ ಮಾಡುವಂತಿಲ್ಲ. ತುರ್ತು ಚಿಕಿತ್ಸೆ ನೀಡದಿದ್ದಲ್ಲಿ ಅಥವಾ ಚಿಕಿತ್ಸೆಗೆ ಮುಂಗಡ ಹಣ ಕೇಳಿದ್ದಲ್ಲಿ ಅಂತಹ ವೈದ್ಯರಿಗೆ ಒಂದು ಲಕ್ಷ ದಂಡ ಹಾಗೂ ಜೈಲುಶಿಕ್ಷೆ ವಿಧಿಸಲಾಗುವುದು ಎಂದು ಆದೇಶ ಹೊರಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read