HomeLatest Newsಕಾನೂನು ಪದವೀಧರರ ವೃತ್ತಿ ತರಬೇತಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಕಾನೂನು ಪದವೀಧರರ ವೃತ್ತಿ ತರಬೇತಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕಾನೂನು ಪದವಿಧರರ ವೃತ್ತಿ ತರಬೇತಿ ಶಿಷ್ಯವೇತನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಕಾನೂನು ಪದವಿಧರರು ಅರ್ಹರಾಗಿದ್ದು, ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನಾ ಆಜಾದ್ ಭವನದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನ.

ಸೂಚನೆ:
ಅಭ್ಯರ್ಥಿಗಳು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷ ಮೀರಿರಬಾರದು. ಅಭ್ಯರ್ಥಿಗಳ ಬಾರ್ ಕೌನ್ಸಿಲ್ನಲ್ಲಿ ಹೆಸರು ನೋಂದಾಯಿಸಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆÀಯ ದಿನಾಂಕಕ್ಕೆ 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯನ್ನು ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕಡೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷಗಳೊಳಗೆ ಇರಬೇಕು.

ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ದೂ.08392-200215, ಮೊ.8310321101, ಸಿರುಗುಪ್ಪ-9148889975, ಸಂಡೂರು-9036925966 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular