ಧಾರವಾಡ : ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿ ಹೊಸದಾಗಿ ಮಂಜೂರಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೊರಾರ್ಜಿ ದೇಸಾಯಿ ವಸತಿ ಕಾಲೇಜು ಗಂಜಿಗಟ್ಟಿ ಇಲ್ಲಿಗೆ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಪಿ.ಯು.ಸಿ. ತರಗತಿ ಪ್ರಾರಂಭವಾಗಿದ್ದು, ಪ್ರಥಮ ಪಿ.ಯು.ಸಿ. ವಿಷಯಗಳ (ವಿಜ್ಞಾನ ವಿಭಾಗ) ಬೋಧನೆಗಾಗಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ 10, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರಾತಿನಿದ್ಯತೆ ನೀಡಲಾಗುವುದು. ವಸತಿ ಶಾಲೆ, ಕಾಲೇಜುಗಳಲ್ಲಿ ಅತಿಥಿ ಶಿಕ್ಷಕರು ಅಥವಾ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅನುಭವ ಇರುವವರಿಗೆ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447201, 7411934749 ಹಾಗೂ 7975156674 ಗೆ ಅಥವಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಅಥವಾ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಕಾಲೇಜುಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.