ಬೆಂಗಳೂರು : ಬೆಂಗಳೂರಿಗರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ ಆರು ಪಥಗಳ 28 ಕಿ.ಮೀ ಉದ್ದದ ಸುರಂಗ ರಸ್ತೆ ನಿರ್ಮಾಣವಾಗಲಿದೆ.
ಹೌದು. ಬೆಂಗಳೂರು ಮಹಾನಗರದ ಸಂಚಾರ ದಟ್ಟಣೆ ಪರಿಹಾರಕ್ಕೆ ಪೂರ್ವ–ಪಶ್ಚಿಮ ಕಾರಿಡಾರ್ ಸುರಂಗ ಮಾರ್ಗದಲ್ಲಿ ‘ಟ್ವಿನ್ ಟ್ಯೂಬ್ ಟನಲ್’ನಲ್ಲಿ (ಡಬಲ್ ಡೆಕ್) ಆರು ಪಥಗಳ 28 ಕಿ.ಮೀ ಉದ್ದದ ಸುರಂಗ ರಸ್ತೆ ನಿರ್ಮಾಣವಾಗಲಿದೆ.
ಕೆ.ಆರ್. ಪುರದಿಂದ ನಾಯಂಡಹಳ್ಳಿ ಬಳಿಯ ನೈಸ್ ರಸ್ತೆ ಜಂಕ್ಷನ್ವರೆಗೆ ಪೂರ್ವ–ಪಶ್ಚಿಮ ಕಾರಿಡಾರ್ ಸುರಂಗ ಮಾರ್ಗ ನಿರ್ಮಿಸುವ ಮೂಲಕ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಯೋಜನೆ ರೂಪಿಸಿದೆ.