BIG NEWS: ಕಾಳಿಂಗ ಸರ್ಪ ಸಂಶೋಧನೆ ಹೆಸರಲ್ಲಿ ಆಗುಂಬೆ ಮಳೆಕಾಡು ಕೇಂದ್ರದಿಂದ ವಂಚನೆ: ತನಿಖೆಗೆ ಆದೇಶಿಸಿದ ಅರಣ್ಯ ಸಚಿವ

ಶಿವಮೊಗ್ಗ: ಕಾಳಿಂಗ ಸರ್ಪ ಸಂಶೋಧನೆ ಹೆಸರಲ್ಲಿ ಆಗುಂಬೆ ಮಳೆಕಾಡು ಸಂಶೋಧನಾ ಕೇಂದ್ರ ವಂಚನೆ ಎಸಗುತ್ತಿದ್ದು, ಕಾನೂನು ಉಲ್ಲಂಘನೆ ಮಾಡುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಆಗುಂಬೆ ಮಳೆಕಾಡು ಸಂಶೋಧನಾ ಕೇಂದ್ರದ ಅಕ್ರಮದ ಬಗ್ಗೆ ಪರಿಶೀಲನೆ ನಡೆಸುವಂತೆ ಜನ ಸಂಗ್ರಾಮ ಪರಿಷತ್ ನಿಂದ ದೂರು ಸಲ್ಲಿಸಲಾಗಿದೆ. ದೂರು ಸ್ವೀಕರಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದ ತಂಡದಿಂದ ತನಿಖೆ ನಡೆಸುವಂತೆ ಆದೇಶ ನೀಡಿದ್ದಾರೆ.

ತನಿಖೆ ನಡೆಸಿ 10 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಕಾಳಿಂಗ ಸರ್ಪ ಮತ್ತದರ ಮರಿಗಳ ವಿಡಿಯೋ ಅಂತರಾಷ್ಟ್ರೀಯ ವನ್ಯಜೀವಿ ಚಲನಚಿತ್ರದಲ್ಲಿ ಬಳಕೆ ಮಾಡುತ್ತಿದ್ದು, ಚಿತ್ರೀಕರಣದ ತುಣುಕಿಗೆ ಭಾರಿ ಬೇಡಿಕೆ ಇದೆ. ಇದನ್ನೇ ಬಂಡವಾಳ ಮಾಡಿಕೊಂಡು ಹಣದ ಆಸೆಗೆ ಸಂಶೋಧನೆ ಹೆಸರಲ್ಲಿ ವಂಚನೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿ ತಲ್ಲೂರು ಗ್ರಾಮದ ಸರ್ವೆ ನಂ.11ರ ಸೋಮೇಶ್ವರ ಅಭಯಾರಣ್ಯದ ಕೇಂದ್ರ ಭಾಗದಲ್ಲಿ ಆಗುಂಬೆ ಮಳೆಕಾಡು ಸಂಶೋಧನಾ ಕೇಂದ್ರದವರು ಅಕ್ರಮವಾಗಿ ಜಮೀನು ಖರೀದಿಸಿದ್ದಾರೆ. ಯಾವುದೇ ಸಂಶೋಧನೆಗೆ ನಿರ್ದಿಷ್ಟ ಸಮಯಕ್ಕೆ ಮಾತ್ರ ಅನುಮತಿ ನೀಡಲಾಗುತ್ತದೆ. ಆದರೆ ಇಲ್ಲಿ ವರ್ಷವಿಡಿ ಸಂಶೋಧನೆ ಹೆಸರಲ್ಲಿ ಛಾಯಾಗ್ರಹಣ ನಡೆಸಲಾಗುತ್ತಿದೆ. ಅರಣ್ಯ ಇಲಾಖೆ ಅನುಮತಿ ಇಲ್ಲದೇ ಅರಣ್ಯ ಭೂಮಿ ಒತ್ತುವರಿ, ಕಟ್ಟಡ ನಿರ್ಮಾಣ, ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯೊಳಗೆ ಪರಿಸರ ಸೂಕ್ಷ್ಮ ಪ್ರದೇಶದ ಖರೀದಿ ಮಾಡಿರುವ ಗಂಭೀರ ಅಕ್ರಮಗಳ ಬಗ್ಗೆ ಸರ್ಕಾರ ಗಮನಹರಿಸುವಂತೆ ಜನ ಸಂಗ್ರಾಮ ಪರಿಷತ್ ಅಧ್ಯಕ್ಷ ಅಖಿಲೇಶ್ ಚಿಪ್ಲಿ ಒತ್ತಾಯಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read