HomeLatest NewsBREAKING: ಏರ್ ಗನ್ ನಿಂದ ಮಿಸ್ ಫೈರ್ ಆಗಿ ಬಾಲಕ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್:...

BREAKING: ಏರ್ ಗನ್ ನಿಂದ ಮಿಸ್ ಫೈರ್ ಆಗಿ ಬಾಲಕ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪೊಲೀಸ್ ತನಿಖೆಯಲ್ಲಿ ಕೆಲಸಗಾರನ ಕೈಯಿಂದ ಫೈರಿಂಗ್ ದೃಢ

ಕಾರವಾರ: ಏರ್ ಗನ್ ನಿಂದ ಮಿಸ್ ಫೈರ್ ಆಗಿ ಬಾಲಕ ಕರಿಯಪ್ಪ ಸಾವನ್ನಪ್ಪಿದ ಪ್ರಕರಣಕ್ಕೆ ಶಿರಸಿ ಗ್ರಾಮಾಂತರ ಠಾಣೆ ಪೊಲೀಸರ ತನಿಖೆಯಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಮೃತ ಬಾಲಕನ ಸಹೋದರನ ಕೈಯಿಂದ ಮಿಸ್ ಫೈರಿಂಗ್ ಆಗಿಲ್ಲ ಎನ್ನುವುದು ದೃಢಪಟ್ಟಿದೆ. ಕೆಲಸಗಾರ ನಿತೀಶ್ ಗೌಡ ಕೈಯಿಂದ ಮಿಸ್ ಫೈರ್ ಆಗಿ ಬಾಲಕ ಸಾವನ್ನಪ್ಪಿದ್ದಾನೆ ಎಂಬುದು ಶಿರಸಿ ಗ್ರಾಮಾಂತರ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ.

ಪೊಲೀಸರು ಸಿಸಿಟಿವಿ ವಿಡಿಯೋಗಳನ್ನು ಪರಿಶೀಲಿಸಿ ದೃಢಪಡಿಸಿದ್ದಾರೆ. ಮಕ್ಕಳಿಬ್ಬರು ಆಟವಾಡುತ್ತಾ ಏರ್ ಗನ್ ಹಿಡಿದುಕೊಂಡಿದ್ದ ನಿತೀಶ್ ಬಳಿಗೆ ಬಂದಿದ್ದಾರೆ. ವಿಶೇಷ ಚೇತನ ನಿತಿಶ್ ಗೌಡನಿಗೆ ಎಡಗೈ ಊನವಾಗಿತ್ತು. ಮಕ್ಕಳು ಬಂದ ಹಿನ್ನೆಲೆಯಲ್ಲಿ ಏರ್ ಗನ್ ಸರಿಸುವಾಗ ಎಡಗೈ ತಾಗಿತ್ತು. ಬಾಲಕ ಕರಿಯಪ್ಪ(9) ಮೃತಪಟ್ಟಿದ್ದ. ಗನ್ ಬಳಸುವ ಮಾಹಿತಿಯೇ ಇಲ್ಲದ ಕೆಲಸಗಾರ ನಿತೀಶ್ ಗೌಡ ಹಾಗೂ ಮನೆ ಮಾಲೀಕ ರಾಘವೇಂದ್ರ ಹೆಗಡೆ ವಿರುದ್ಧ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿರಸಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಸೋಮನಹಳ್ಳಿಯ ರಾಘವೇಂದ್ರ ಹೆಗಡೆ ಎಂಬವರ ತೋಟದಲ್ಲಿ ಘಟನೆ ನಡೆದಿತ್ತು. ಮಂಗ ಓಡಿಸಲು ಬಳಸುವ ಏರ್ ಗನ್ ನಿಂದ ಗುಂಡು ಸಿಡಿದು ಅವಘಡ ಸಂಭವಿಸಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular