ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ ಕಸ್ಟಡಿ ಅವಧಿ ಶನಿವಾರಕ್ಕೆ ಮುಕ್ತಾಯವಾಗಲಿದೆ. ಶನಿವಾರ ಎಸ್ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.
ನ್ಯಾಯಾಲಯ ಚಿನ್ನಯ್ಯನಿಗೆ ನ್ಯಾಯಾಂಗ ಬಂಧನ ವಿಧಿಸುವ ಸಾಧ್ಯತೆ ಇದೆ. ಇದುವರೆಗೆ ಒಟ್ಟು 15 ದಿನ ಚಿನ್ನಯ್ಯ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ಎದುರಿಸಿದ್ದು, ಮಹತ್ವದ ಮಾಹಿತಿಗಳನ್ನು ಎಸ್ಐಟಿ ಕಲೆ ಹಾಕುವಲ್ಲಿ ಯಶಸ್ವಿಯಾಗಿದೆ.
ಚಿನ್ನಯ್ಯನನ್ನು ಬೆಂಗಳೂರು ಮತ್ತು ಉಜಿರೆಯ ಸ್ಥಳಗಳಿಗೆ ಕರೆದುಕೊಂಡು ಹೋಗಿ ಮಹಜರು ನಡೆಸಲಾಗಿದೆ. ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ನೇತೃತ್ವದಲ್ಲಿ ಎಸ್ಐಟಿ ತಂಡದ ಅಧಿಕಾರಿಗಳು ಮಂಗಳೂರಿನಲ್ಲಿ ಸಭೆ ನಡೆಸಿದ್ದಾರೆ. ಇಂದು ಚಿನ್ನಗೆನನ್ನು ಕೋರ್ಟ್ ಗೆ ಹಾಜರುಪಡಿಸುವ ಬಗ್ಗೆ ತನಿಖೆ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.