ಬೆಳಗಾವಿ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುತ್ತಿದ್ದ ಇಬ್ಬರು ಅಪ್ರಾಪ್ತ ಯುವಕರ ನಡುವೆ ಪ್ರೇಯಸಿ ವಿಚಾರವಾಗಿ ಗಲಾಟೆ ನಡೆದಿದ್ದು, ಚೂರಿ ಇರಿದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಅಪ್ರಾಪ್ತ ಯುವಕರಿಬ್ಬರೂ ಪರಸ್ಪರ ಚಾಕು ಇರಿದುಕೊಂಡಿದ್ದು, ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಬೆಳಗಾವಿಯ ರಾಯಲ್ ಸ್ಕೂಲ್ ಬಳಿ ಈ ಘಟನೆ ನಡೆದಿದೆ. ಇಬ್ಬರೂ ಅಪ್ರಾಪ್ತಳನ್ನು ಪ್ರೀತಿಸುತ್ತಿದ್ದರು. ಒಬ್ಬಳಿಗಾಗಿ ಇಬ್ಬರು ಅಪ್ರಾಪ್ತರ ನಡುವೆ ಜಗಳ ಶುರುವಾಗಿದ್ದು, ಚೂರಿ ಇರಿದುಕೊಂಡಿದ್ದಾರೆ. ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಇನ್ನಿಬ್ಬರು ಸಣ್ಣಪುಟ್ಟ ಗಾಯಗೊಂಡಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಮೊಹಮ್ಮದ್ ಖಾಜಿಯನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೋರ್ವ ಮೊಹಮ್ಮದ್ ಅಟ್ಮಸ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.