ಬೆಂಗಳೂರು : ನಟ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂಬ ಕೂಗು ಜೋರಾಗಿ ಕೇಳಿಬರುತ್ತಿದೆ. ಇತ್ತೀಚೆಗಷ್ಟೇ ಹಿರಿಯ ನಟಿಯರು ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾಗಿ ಮನವಿ ಸಲ್ಲಿಸಿದ್ದರು.
ಇದೀಗ ಸ್ಯಾಂಡಲ್ ವುಡ್ ಹಿರಿಯ ನಟಿಯರು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ನಟಿಯರಾದ ಜಯಮಾಲಾ, ಶೃತಿ ಹಾಗೂ ಮಾಳವಿಕಾ ಅವಿನಾಶ್ ಅವರು ಇಂದು ಡಿಸಿಎಂ ಡಿಕೆಶಿ ಅವರನ್ನ ಗೃಹ ಕಚೇರಿಯಲ್ಲಿ ಭೇಟಿಯಾಗಿ, ಮೇರು ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಾಗೂ ಅವರ ಸ್ಮಾರಕ ನಿರ್ಮಾಣ ಸಂಬಂಧ ಮನವಿ ಸಲ್ಲಿಸಿದರು. ಇದೇ ವೇಳೆ ಇತ್ತೀಚೆಗೆ ನಿಧನರಾದ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು.

