BREAKING: ಜೈಲುಪಾಲಾದ ‘ಬುರುಡೆ’ ಚಿನ್ನಯ್ಯ: ಶಿವಮೊಗ್ಗ ಸೆಂಟ್ರಲ್ ಜೈಲಿಗೆ ಶಿಫ್ಟ್!

ಮಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ್ದ ಆರೋಪಿ ಸಿ.ಎನ್.ಚಿನ್ನಯ್ಯನನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಧರ್ಮಸ್ಥಳ ಬುರುಡೆ ಚಿನ್ನಯ್ಯ ಕೊನೆಗೂ ಜೈಲುಪಾಲಾಗಿದ್ದಾನೆ. ಆರೋಪಿ ಚಿನ್ನಯ್ಯನ 15 ದಿನಗಳ ಎಸ್ ಐಟಿ ಕಸ್ಟಡಿ ಅವಧಿ ಇಂದಿಗೆ ಮುಗಿದ ಹಿನ್ನೆಲೆಯಲ್ಲಿ ಆತನನ್ನು ದಕ್ಷಿಣ ಕನ್ನಡ ಜಿಲೆಯ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಾಯಿತು. ಈಗಾಗಲೇ ಆತನ ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳು ಮತ್ತೆ ಕಸ್ಟಡಿಗೆ ಕೇಳಿಲ್ಲ. ಈ ಹಿನ್ನೆಲೆಯಲ್ಲಿ ಚಿನ್ನಯ್ಯನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಈ ನಡುವೆ ಭದ್ರತೆ ದೃಷ್ಟಿಯಿಂದ ಆರೋಪಿ ಚಿನ್ನಯ್ಯನನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ಮಂಗಳೂರು ಜೈಲಿನ ಬದಲು ಶುವಮೊಗ್ಗ ಕಾರಾಗೃಹಕ್ಕೆ ಆತನನ್ನು ಸ್ಥಳಾಂತರಿಸಲು ಪೊಲಿಸರು ಸಿದ್ಧತೆ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read