ಮಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ್ದ ಆರೋಪಿ ಸಿ.ಎನ್.ಚಿನ್ನಯ್ಯನನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಬೆಳ್ತಂಗಡಿ ಕೋರ್ಟ್ ಆದೇಶ ಹೊರಡಿಸಿದೆ.
ಬುರುಡೆ ಚಿನ್ನಯ್ಯನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಜೈಲುಪಾಲಾಗಿದ್ದಾನೆ. ಭದ್ರತೆ ದೃಷ್ಟಿಯಿಂದ ಚಿನ್ನಯ್ಯನನ್ನು ಶಿವಮೊಗ್ಗ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗುತ್ತಿದೆ. ಜೈಲುಪಾಲಾಗುತ್ತಿದ್ದಂತೆಯೇ ಚಿನ್ನಯ್ಯ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾನೆ.
ಚಿನ್ನಯ್ಯ ಪರ ವಕೀಲರು ಬೆಳಂಗಡಿ ಕೋರ್ಟ್ ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಉಚಿತ ಕಾನೂನು ಸೇವೆಗಳ ಪ್ರಾಧಿಕಾರ ನೇಮಿಸಿದ್ದ ಚಿನ್ನಯ್ಯ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಕೋರ್ಟ್ ಸೆಪ್ಟೆಂಬರ್ 9ಕ್ಕೆ ವಿಚಾರಣೆ ಮುಂದೂಡಿದೆ.