ಶಿವಮೊಗ್ಗ: ಶಿವಮೊಗ್ಗದಲ್ಲಿ ಇಂದು ಹಿಂದೂ ಮಹಾಸಭಾ ಗಣೇಶ ವಿಸರ್ಜನಾ ಪೂರ್ವ ಮೆರವಣಿಗೆ ವೈಭವದಿಂದ ನಡೆದಿದೆ.
ಅಪಾರ ಸಂಖ್ಯೆಯಲ್ಲಿ ಜನ ಮೆರವಣಿಗೆಯಲ್ಲಿ ಭಾಗಿಯಾಗಿ ಸಂಭ್ರಮಿಸಿದ್ದಾರೆ. ಇದೇ ವೇಳೆ ನಟ ದರ್ಶನ್ ಅಭಿಮಾನಿಗಳು ದರ್ಶನ್ ಅವರ ಫೋಟೋ ಹಿಡಿದು ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ಶಿವಮೊಗ್ಗದ ನೆಹರು ರಸ್ತೆಯಲ್ಲಿ ಗಣಪತಿ ಮೆರವಣಿಗೆ ಸಾಗುವ ಮೊದಲು ದರ್ಶನ್ ಅಭಿಮಾನಿಗಳು ನೆಚ್ಚಿನ ನಟನ ಫೋಟೋ ಹಿಡಿದು ಡಿ ಬಾಸ್ ಎಂದು ಘೋಷಣೆ ಕೂಗಿದ್ದಾರೆ. ದರ್ಶನ್ ಫೋಟೋ ಎತ್ತಿಕೊಂಡು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯುವಕರು ದರ್ಶನ್ ಪರ ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ. ದರ್ಶನ್ ಗೆ ಒಳಿತಾಗಲಿ ಎಂದು ಪ್ರಾರ್ಥಿಸಿದ್ದಾರೆ.