HomeLatest NewsBIG NEWS: ಇದೇ ಮೊದಲ ಬಾರಿಗೆ ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ NRI ಕೋಟಾದಡಿ ಶೇ. 15ರಷ್ಟು...

BIG NEWS: ಇದೇ ಮೊದಲ ಬಾರಿಗೆ ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ NRI ಕೋಟಾದಡಿ ಶೇ. 15ರಷ್ಟು ಸೀಟು ನೀಡಲು ನಿರ್ಧಾರ

ಬೆಂಗಳೂರು: ಇದೇ ಮೊದಲ ಬಾರಿಗೆ ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರಿಗೆ ಶೇಕಡ 15ರಷ್ಟು ಕೋಟಾ ಸೀಟುಗಳನ್ನು ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2025- 26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಆದೇಶಿಸಿದೆ. ಹೊಸ 450 ಸೀಟುಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇಕಡ 15ರಷ್ಟು ಎನ್.ಆರ್.ಐ. ಕೋಟಾ ನಿಗದಿಪಡಿಸಲಾಗಿದೆ. ಇದಕ್ಕೆ 25 ಲಕ್ಷ ರೂ, ಶುಲ್ಕ ನಿಗದಿ ಮಾಡಲಾಗಿದೆ. ಇದರಿಂದ ಸರ್ಕಾರಿ ವೈದ್ಯಕೀಯ ಕಾಲೇಜು ಸಂಸ್ಥೆಗಳು ಸರ್ಕಾರದ ಅನುದಾನದ ಮೇಲೆ ಹೆಚ್ಚು ಅವಲಂಬನೆಯಾಗದೆ ಸ್ವಾವಲಂಬಿಯಾಗಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಬೆಂಗಳೂರು, ಮೈಸೂರು, ಬೆಳಗಾವಿ, ಚಿಕ್ಕಬಳ್ಳಾಪುರ, ಕಲಬುರಗಿ, ಹಾಸನ, ರಾಯಚೂರು, ವಿಜಯನಗರದಲ್ಲಿರುವ ಸರ್ಕಾರಿ ಮೆಡಿಕಲ್ ಕಾಲೇಜುಗಳಿಗೆ ಹೆಚ್ಚುವರಿಯಾಗಿ ತಲಾ 50 ಸೀಟು ಹಂಚಿಕೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular