HomeLatest Newsನೋಟಿಸ್ ಕೊಡಲು ಬಂದ ಕೋರ್ಟ್ ಅಮೀನ್ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ…!

ನೋಟಿಸ್ ಕೊಡಲು ಬಂದ ಕೋರ್ಟ್ ಅಮೀನ್ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ…!

ಮಂಡ್ಯ: ಕೋರ್ಟ್ ಅಮೀನ್ ಕಣ್ಣಿಗೆ ಮಹಿಳೆ ಖಾರದಪುಡಿ ಎರಚಿದ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ.

ಅಪಘಾತ ಪ್ರಕರಣ ಸಂಬಂಧ ನೋಟಿಸ್ ಕೊಡಲು ಬಂದಿದ್ದ ಅಮೀನ್ ಗೆ ಖಾರದಪುಡಿ ಎರಚಲಾಗಿದೆ. ಕೆಆರ್ ಪೇಟೆ ಪಟ್ಟಣದ ಸಿವಿಲ್ ಕೋರ್ಟ್ ಅಮೀನ್ ಶಂಕರೇಗೌಡ ಕಣ್ಣಿಗೆ ಸಾಕಮ್ಮ ಖಾರದ ಪುಡಿ ಎರಚಿದ್ದಾರೆ.

ಪೊಲೀಸರಿಗೂ ಮಾಹಿತಿ ನೀಡದೇ ಅಮೀನ್ ಸ್ಥಳಕ್ಕೆ ಹೋಗಿದ್ದರು. ಚಿಕ್ಕಮಗಳೂರಿನಲ್ಲಿ ನಡೆದ ಅಪಘಾತ ಪ್ರಕರಣ ಸಂಬಂಧ ನೋಟಿಸ್ ಕೊಡಲು ಹೋಗಿದ್ದರು. ವಾಹನ ಮಾಲೀಕನ ಜೊತೆಗೆ ನೇರವಾಗಿ ಕೋರ್ಟ್ ಅಮೀನ್ ತೆರಳಿದ್ದರು. ಸದ್ಯ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ. ಖಾರದಪುಡಿ ಎರಚುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular