ಬೆಂಗಳೂರು: ಕಾರ್ಖಾನೆಯೊಂದರಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರಿನ ಆನೇಕಲ್ ನಲ್ಲಿ ನಡೆದಿದೆ.
ಇಲ್ಲಿನ ಹೀಲಲಿಗೆ ಎಂಬಲ್ಲಿ ವಿಶಾಲ್ ಟ್ರೈಬೊಟೆಕ್ ಪ್ರೈವೆಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಖಾರ್ಖಾನೆಯಲ್ಲಿದ್ದ ಆಯಿಲ್ ಬ್ಯಾರೆಲ್ ಗಳು ಬೆಂಕಿಗಾಹುತಿಯಾಗಿದ್ದು, ಕಟ್ಟಡದ ತುಂಬೆಲ್ಲ ಧಗಧಗನೆ ಬೆಂಕಿ ಹೊತ್ತಿ ಉರಿದಿದೆ.
ಬೆಂಕಿಯ ಕೆನ್ನಾಲಿಗೆ ಇಡೀ ಕಾರ್ಖಾನೆಯನ್ನು ವ್ಯಾಪಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.