HomeLatest NewsBIG NEWS: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಪತಿಯ ಹತ್ಯೆಗೆ ಯತ್ನ

BIG NEWS: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಪತಿಯ ಹತ್ಯೆಗೆ ಯತ್ನ

ವಿಜಯಪುರ: ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯನ್ನು ಹತ್ಯೆ ಮಾಡಲು ಯತ್ನಿಸಿರುವ ಘಟನೆ ವಿಜಯಪುರ ಜಿಲ್ಲೆಯ ಅಕ್ಕಮಹಾದೇವಿ ನಗರದಲ್ಲಿ ನಡೆದಿದೆ.

ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿಯಾಗಿದ್ದಕ್ಕೆ ಆತನನ್ನೇ ಕೊಲೆ ಮಾಡಲು ಪತ್ನಿ ಮುಹೂರ್ತ ಇಟ್ಟಿದ್ದು, ಪತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಪತಿ ಬೀರಪ್ಪನನ್ನು ಕೊಲೆಗೈಯ್ಯಲು ಪತ್ನಿ ಸುನಂದಾ ಯತ್ನಿಸಿದ್ದಾಳೆ.

ಸುನಂದಾ, ಸಿದ್ದಪ್ಪ ಕ್ಯಾತಕೇರಿ ಎಂಬಾತನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಗಿ ಬೀರಪ್ಪ ಆರೋಪಿಸಿದ್ದು, ಸೆ.೧ರಂದು ರಾತ್ರಿ ಸಿದ್ದಪ್ಪ ಮನೆಗೆ ನುಗ್ಗಿದ್ದು, ತನ್ನ ಕತ್ತು ಹಿಸುಕಿ, ಮರ್ಮಾಂಗಕ್ಕೆ ಒದ್ದು ಮಾರಾಣಂತಿಕವಾಗಿ ಹಲ್ಲೆ ನಡೆಸಿದ್ದಾನೆ ಪತ್ನಿ ಹಾಗೂ ಆತನ ಗೆಳೆಯ ಸೇರಿ ತನ್ನನ್ನು ಹತ್ಯೆ ಮಾಡಲು ಯತ್ನಿಸಿದ್ದಾಗಿ ಬೀರಪ್ಪ ಆರೋಪಿಸಿದ್ದು, ಗಾಯಾಳು ಬೀರಪ್ಪ ಆಸ್ಪತ್ರೆಗೆ ದಾಖಲಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular