ಬೆಂಗಳೂರು: ಅಕ್ರಮ ಹಣ ವರ್ಗಾವಣೆ, ಅಕ್ರಮ ಆನ್ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ಜಾರಿ ನಿರ್ದೇಶನಾಲಯ(ಇಡಿ) ಕಸ್ಟಡಿ ಅವಧಿ ಸೋಮವಾರಕ್ಕೆ ಅಂತ್ಯವಾಗಲಿದೆ.
16 ದಿನಗಳಿಂದ ಇಡಿ ವಶದಲ್ಲಿರುವ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಇಡಿ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಇಡಿ ದಾಳಿಯ ಸಂದರ್ಭದಲ್ಲಿ ಜಪ್ತಿ ಮಾಡಲಾದ ಭಾರಿ ಪ್ರಮಾಣದ ಹಣ, ಚಿನ್ನಾಭರಣ, ಅಸ್ತಿ ದಾಖಲೆ, ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ವ್ಯವಹಾರ ಸೇರಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಹೇಳಿಕೆ ದಾಖಲಿಸಿದ್ದಾರೆ.
ಇಂದಿಗೆ ಕಸ್ಟಡಿ ಅಂತ್ಯವಾಗಲಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವೀರೇಂದ್ರ ಪಪ್ಪಿ ಅವರನ್ನು ಹಾಜರುಪಡಿಸಲಿದ್ದಾರೆ. ತನಿಖೆಯ ವೇಳೆ ಮತ್ತಷ್ಟು ಅಕ್ರಮ ಬಯಲಾಗಿದ್ದರಿಂದ ಹೆಚ್ಚಿನ ವಿಚಾರಣೆಗಾಗಿ ಮತ್ತೆ ಅವರನ್ನು ಮತ್ತೆ ವಶಕ್ಕೆ ನೀಡುವಂತೆ ಮನವಿ ಮಾಡುವ ಸಾಧ್ಯತೆ ಇದೆ.