HomeLatest Newsಸೆ. 22ರಿಂದ ರಾಜ್ಯಾದ್ಯಂತ ಪಡಿತರ ಚೀಟಿ, ಆಧಾರ್ ದೃಢೀಕರಣದೊಂದಿಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ

ಸೆ. 22ರಿಂದ ರಾಜ್ಯಾದ್ಯಂತ ಪಡಿತರ ಚೀಟಿ, ಆಧಾರ್ ದೃಢೀಕರಣದೊಂದಿಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ

ಬೆಂಗಳೂರು: ‘ನಮ್ಮ ಸಮೀಕ್ಷೆ ನಮ್ಮ ಜವಾಬ್ದಾರಿ’ ಅಭಿಯಾನದಡಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆಪ್ಟಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ರಾಜ್ಯಾದ್ಯಂತ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ ಮನೆ ಮನೆಗೆ ಬಂದು ಸಮೀಕ್ಷೆ ನಡೆಸಲಾಗುವುದು. ಸಮೀಕ್ಷೆಯ ವೇಳೆ ಸುಮಾರು 60 ಪ್ರಶ್ನೆಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಪಡಿತರ ಚೀಟಿ ಅಥವಾ ಆಧಾರ್ ಸಂಖ್ಯೆಯ ದೃಢೀಕರಣದೊಂದಿಗೆ ಸಮೀಕ್ಷೆ ನಡೆಸಲಾಗುವುದು.

ಪಡಿತರ ಚೀಟಿ, ಆಧಾರ್ ಸಂಖ್ಯೆ, ಮತದಾರರ ಗುರುತಿನ ಚೀಟಿ, ವಿಕಲಚೇತನರಾಗಿದ್ದಲ್ಲಿ ಯುಐಡಿ ಕಾರ್ಡ್ ಅಥವಾ ಪ್ರಮಾಣ ಪತ್ರಗಳನ್ನು ಸಿದ್ಧವಾಗಿಟ್ಟುಕೊಂಡಿರಬೇಕು. ಪ್ರತಿ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಗಳು ಮೊಬೈಲ್ ನಂಬರ್ ಗೆ ಲಿಂಕ್ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಸಮೀಕ್ಷೆಯ ಸಂದರ್ಭದಲ್ಲಿ ಇ-ಕೆವೈಸಿ ಪ್ರಕ್ರಿಯೆಗೆ ಒಟಿಪಿ ಸಂಖ್ಯೆ ಬರುತ್ತದೆ. ಈ ಸಂಖ್ಯೆಯು ಸದಸ್ಯರ ಆಧಾರ್ ನಂಬರ್ ಗೆ ಜೋಡಣೆಯಾಗಿರುವ ಮೊಬೈಲ್ ಗೆ ಸಂದೇಶ ಬರುತ್ತದೆ. ಒಂದುವೇಳೆ ಆ ಸದಸ್ಯರು ಮನೆಯಲ್ಲಿ ಇಲ್ಲದಿದ್ದರೆ ಕುಟುಂಬದ ಪರವಾಗಿ ಉತ್ತರ ನೀಡುವ ಸದಸ್ಯರು ಫೋನ್ ಮೂಲಕ ಒಟಿಪಿ ಸಂಖ್ಯೆ ಪಡೆದು ಮಾಹಿತಿ ನೀಡಬೇಕಿದೆ. 6 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರ ಸದಸ್ಯರಿಗೂ ಆಧಾರ್ ಕಡ್ಡಾಯವಾಗಿದೆ. ಮೊಬೈಲ್ ನಂಬರ್ ಆಧಾರ್ ನಂಬರ್ ಗೆ ಲಿಂಕ್ ಆಗಿಲ್ಲದಿದ್ದರೆ ಅದನ್ನು ತಕ್ಷಣವೇ ಲಿಂಕ್ ಮಾಡಿಸಿಕೊಳ್ಳಬೇಕಿದೆ‌.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಶ್ನಾವಳಿಯಲ್ಲಿ ವ್ಯಾಪಾರ, ಉದ್ಯೋಗ, ವಿದ್ಯಾರ್ಹತೆ, ಆದಾಯ, ಆಸ್ತಿ, ಧರ್ಮ, ಜಾತಿ, ಉಪಜಾತಿ, ಕುಲಕಸುಬು ಇತರೆ ಮಾಹಿತಿಗಳ ಪ್ರಶ್ನೆಗಳು ಇರುತ್ತವೆ. ಹೆಚ್ಚಿನ ಮಾಹಿತಿಗಾಗಿ ಆಯೋಗದ ಸಹಾಯವಾಣಿ ಸಂಖ್ಯೆ 8050770004, https://kscbc.karnataka.gov.in ವೆಬ್ಸೈಟ್ ಗೆ ಭೇಟಿ ನೀಡಬಹುದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular