ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಭಾನುವಾರ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಗಣಪತಿ ಮೂರ್ತಿಯ ಮೇಲೆ ಅನ್ಯಕೋಮಿನ ಕಿಡಿಗೇಡಿಗಳು ಕಲ್ಲು ಮತ್ತು ಕಬ್ಬಿಣದ ರಾಡ್ ಗಳನ್ನು ತೂರಿದ್ದಾರೆ. ಇದರ ಬೆನ್ನಲ್ಲೇ ಧಾರ್ಮಿಕ ಕೇಂದ್ರವೊಂದರ ಮೇಲೆ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದರಿಂದ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಕಲ್ಲೆಸೆತದಲ್ಲಿ ಪೊಲೀಸರು ಸೇರಿ 30 ಜನ ಗಾಯಗೊಂಡಿದ್ದು, ಲಾಠಿ ಪ್ರಹಾರ ನಡೆಸಿ ಗುಂಪುಗಳನ್ನು ಚದುರಿಸಲಾಗಿದೆ. ಎರಡು ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ. ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದು, 20ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.