BIG NEWS : ಸೆ.22 ರಿಂದ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭ, ಈ ಮಾಹಿತಿ ನೀಡುವಂತೆ ಸರ್ಕಾರ ಆದೇಶ

ಬೆಂಗಳೂರು : ಸೆ.22 ರಿಂದ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದ್ದು, ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎನ್ನುವುದು ರಾಜ್ಯದ ಎಲ್ಲಾ ಜನರ ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳನ್ನು ತಿಳಿದುಕೊಂಡು ರಾಜ್ಯದ ಭವಿಷ್ಯದ ನೀತಿ ನಿರೂಪಣೆಯ ಆಧಾರವಾಗುತ್ತದೆ. ಈ ಕಾರ್ಯವು ನಾಗರೀಕರಾದ ನಮ್ಮೆಲ್ಲರ ಜವಾಬ್ದಾರಿಯಾಗಿರುತ್ತದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಮನೆಮನೆ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ರಾಜ್ಯದಾದ್ಯಂತ ಹಮ್ಮಿಕೊಂಡಿದೆ.
ಸಮೀಕ್ಷೆಯ ಪ್ರಶ್ನಾವಳಿಯಲ್ಲಿ ಸುಮಾರು 60 ಪ್ರಶ್ನೆಗಳಿದ್ದು, ಪಡಿತರ ಚೀಟಿ ಅಥವಾ ಆಧಾರ್ ಸಂಖ್ಯೆಯನ್ನು ದೃಢೀಕರಣ ಪತ್ರವಾಗಿ ಆಧಾರ ಮಾಡಿಕೊಂಡು ಸಮೀಕ್ಷೆ ಕಾರ್ಯವನ್ನು ನಡೆಸಲಾಗುತ್ತದೆ. ಈ ಸಂದರ್ಭದಲ್ಲಿ ಪಡಿತರ ಚೀಟಿ, ಆಧಾರ್ ಕಾರ್ಡ್/ಸಂಖ್ಯೆ, ಮತದಾರರ ಗುರುತಿನ ಚೀಟಿ, ವಿಕಲಚೇತನರಾಗಿದ್ದಲ್ಲಿ UID ಕಾರ್ಡ್ ಅಥವಾ ಪ್ರಮಾಣ ಪತ್ರ ಗಳನ್ನು ಸಿದ್ಧವಾಗಿಟ್ಟು ಕೊಳ್ಳಬೇಕಾಗಿರುತ್ತದೆ.

ಪ್ರತಿ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ಗಳು ಮೊಬೈಲ್ ನಂಬರ್ಗಳಿಗೆ ಲಿಂಕ್ ಆಗಿರುವುದನ್ನು ಖಚಿತಪಡಿಸಿಕೊಳ್ಳುವುದು ಅತ್ಯಗತ್ಯ. ಸಮೀಕ್ಷೆ ವೇಳೆ ಇ-ಕೆವೈಸಿ ( e-KYC) ಪ್ರಕ್ರಿಯೆಗಾಗಿ OTP ಸಂಖ್ಯೆ ಆ ಸದಸ್ಯರ ಆಧಾರ್ ನಂಬರ್ಗೆ ಜೋಡಣೆ ಆಗಿರುವ ಮೊಬೈಲ್ ನಂಬರ್ಗೆ ಬರುತ್ತದೆ. ಒಂದು ವೇಳೆ ಆ ಸದಸ್ಯರು ಮನೆಯಲ್ಲಿ ಇಲ್ಲದಿದ್ದರೆ ಕುಟುಂಬದ ಪರವಾಗಿ ಉತ್ತರ ನೀಡುತ್ತಿರುವ ಸದಸ್ಯರು ಫೋನ್ ಮೂಲಕ OTP ಸಂಖ್ಯೆಯನ್ನು ಪಡೆದು ಮಾಹಿತಿ ನೀಡಬೇಕಾಗುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read