ಮಂಡ್ಯ : ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಗಲಾಟೆ ಮಾಡಿದವರ ಬಂಧನವಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಮದ್ದೂರಿನ ಕೆಲವು ಕಡೆ ಸಣ್ಣಪುಟ್ಟ ಘಟನೆಗಳಾಗಿದೆ. ಹೆಚ್ಚುವರಿ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಎಲ್ಲವೂ ನಿಯಂತ್ರಣದಲ್ಲಿದೆ. ಗಲಾಟೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದೇವೆ. ಬಿಜೆಪಿವರು ಆರೋಪ ಮಾಡುತ್ತಾರೆ, ಅದೇ ಅವರಿಗೆ ಕೆಲಸ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದ್ದ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪರಿಸ್ಥಿತಿ ತಿಳಿಗೊಳಿಸಿದ್ದು, ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಾಳೆ ಬೆಳಗ್ಗೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ರೂಟ್ ಮಾರ್ಚ್ ನಡೆಸಲಾಗಿದೆ. ಮದ್ದೂರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ದಾರೆ.