HomeLatest Newsಗಗನಯಾನಿ ಶುಭಾಂಶು ಶುಕ್ಲ ಜತೆ ರಾಜ್ಯದ ಶಾಲಾ ವಿದ್ಯಾರ್ಥಿಗಳ ಸಂವಾದಕ್ಕೆ ಅವಕಾಶ

ಗಗನಯಾನಿ ಶುಭಾಂಶು ಶುಕ್ಲ ಜತೆ ರಾಜ್ಯದ ಶಾಲಾ ವಿದ್ಯಾರ್ಥಿಗಳ ಸಂವಾದಕ್ಕೆ ಅವಕಾಶ

ಬೆಂಗಳೂರು: ಗಗನಯಾತ್ರಿ ಶುಭಾಂಶು ಶುಕ್ಲ ಅವರೊಂದಿಗೆ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮ ಏರ್ಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಸಚಿವ ಎನ್.ಎಸ್. ಬೋಸರಾಜು ಈ ಬಗ್ಗೆ ಮಾಹಿತಿ ನೀಡಿದ್ದು, ನಮ್ಮ ಮನವಿಯಂತೆ ಆಕ್ಸಿಯಂ -4 ಮಿಷನ್ ನ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮಕ್ಕೆ ಇಸ್ರೋ ಅಧ್ಯಕ್ಷ ವಿ. ನಾರಾಯಣ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಸ್ರೋ ಸಹಯೋಗದಲ್ಲಿ ನೆಹರು ಪ್ಲಾನೆಟೇರಿಯಂ ನಲ್ಲಿ ಸಂವಾದ ಕಾರ್ಯಕ್ರಮ ಆಯೋಜಿಸಲಾಗುವುದು. ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳ ಶಾಲಾ ವಿದ್ಯಾರ್ಥಿಗಳಿಗೆ ಸಂವಾದದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular