ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ದೂರು ಬಂದ್ ಗೆ ಹಿಂದೂ ಪರ ಸಂಘಟನೆಗಳು ಕರೆ ನೀಡಿವೆ.
ಕಲ್ಲು ತೂರಾಟ ಮತ್ತು ಕಲ್ಲು ತೂರಾಟ ವಿರೋಧಿಸಿ ಪ್ರತಿಭಟನೆ ಕೈಗೊಂಡಿದ್ದವರ ಮೇಲೆ ಲಾಠಿಚಾರ್ಜ್ ಖಂಡಿಸಿ ಮದ್ದೂರು ಬಂದ್ ಗೆ ಕರೆ ನೀಡಲಾಗಿದ್ದು, ಸ್ವಯಂ ಪ್ರೇರಿತವಾಗಿ ಅಂಗಡಿ ಬಾಗಿಲು ಮುಚ್ಚುವಂತೆ ವರ್ತಕರಿಗೆ ಮನವಿ ಮಾಡಲಾಗಿದೆ.
ಬಿಜೆಪಿ ನಿಯೋಗ ಭೇಟಿ
ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೋರಾಟ ನಾಳೆ ಮದ್ದೂರಿಗೆ ರಾಜ್ಯ ಬಿಜೆಪಿ ನಿಯೋಗ ಭೇಟಿ ನೀಡಲಿದೆ. ಇಂದು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಾಳೆ ನಿಯೋಗ ಭೇಟಿ ನೀಡಲಿದೆ.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದ ನಿಯೋಗ ಇಂದು ಮದ್ದೂರು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಾಳೆ ಭೇಟಿ ನೀಡಲಿದ್ದಾರೆ. ನಾಳೆ ಸಾಮೂಹಿಕ ಗಣೇಶ ವಿಸರ್ಜನೆಯಲ್ಲಿ ನಾಯಕರು ಪಾಲ್ಗೊಳ್ಳಲಿದ್ದಾರೆ. ಲಾಠಿ ಚಾರ್ಜ್ ನಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲಿದ್ದಾರೆ.
ನಿಷೇಧಾಜ್ಞೆ:
ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಿಷೇಧಾಜ್ಞೆ ಮುಂದುವರೆದಿದೆ. ಬುಧವಾರ ಬೆಳಗ್ಗೆ 6 ಗಂಟೆಯವರೆಗೆ ಮದ್ದೂರಿನಲ್ಲಿ ನಿಷೇಧಾಜ್ಞೆ ಮುಂದುವರೆಯಲಿದ್ದು, ಮುಂದಿನ ಪರಿಸ್ಥಿತಿ ನೋಡಿ ಮತ್ತೆ ನಿಷೇಧಾಜ್ಞೆ ವಿಸ್ತರಿಸುವ ಸಾಧ್ಯತೆ ಇದೆ.