ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಗೆಂದು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ದಾಖಲಾಗಿದ್ದ ಸಜಾ ಕೈದಿ ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ನಡೆದಿದೆ.
ಚೇತನ್ ಕಲ್ಯಾಣಿ ಆಸ್ಪತ್ರೆಯಿಂದ ಎಸ್ಕೇಪ್ ಆಗಿರುವ ಕೈದಿ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸಜಾ ಕೈದಿ ಚೇತನ್ ಕಲ್ಯಾಣಿಯನ್ನು ಬಿಜಾಪುರ ಜೈಲಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಬಾಯಿ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಕೈದಿಯನ್ನು ಚಿಕಿತ್ಸೆಗಾಗಿ ಕಿದ್ವಾಯಿ ಆಸ್ಪತ್ತೆಗೆ ಕರೆತರಲಾಗಿತ್ತು. ಈ ವೇಳೆ ಜೈಲು ಸಿಬ್ಬಂದಿ ಕಣ್ತಪ್ಪಿಸಿ ಕೈದಿ ಪರಾರಿಯಾಗಿದ್ದಾನೆ. ಆಸ್ಪತ್ರೆ ಸಿಬ್ಬಂದಿ ಹಿಡಿಯಲು ಯತ್ನಿಸಿದರೂ ಸಾಧ್ಯವಾಗಿಲ್ಲ.
ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿ ರಘು ನೀಡಿರುವ ದೂರಿನ ಮೇರೆಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.