ಬೆಂಗಳೂರು : 2025-26 ನೇ ಸಾಲಿನ ಕರ್ನಾಟಕ ಎಸ್ ಎಸ್ ಎಲ್ ಸಿ (SSLC) ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ.
2025-26ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆರ್ಧವಾರ್ಷಿಕ ಪರೀಕ್ಷೆಯನ್ನು ನಡೆಸಲು ಮಂಡಳಿಯಿಂದ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ ನೀಡುವಂತೆ, ಉಲ್ಲೇಖಿತ ಸುತ್ತೋಲೆಯಲ್ಲಿ ಆದೇಶವಾಗಿರುತ್ತದೆ. ಅದರಂತೆ ಎಲ್ಲಾ ವಿಷಯಗಳಿಗೆ ಮಂಡಲಿ ಹಂತದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗಿದ್ದು, ಪ್ರಶ್ನೆ ಪತ್ರಿಕಗಳನ್ನು ಶಾಲಾ ಮುಖ್ಯ ಶಿಕ್ಷಕರ ಲಾಗಿನ್ಗೆ ಲಭ್ಯಗೊಳಿಸಲಾಗುವುದು.
ಅದರಂತೆ, 2025-26 ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆಯನ್ನು ದಿನಾಂಕ:12-09-2025 ರಿಂದ ದಿನಾಂಕ:19-09-2025 ರವರೆಗೆ ನಡೆಸಲು ತೀರ್ಮಾನಿಸಿ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಸದರಿ ವೇಳಾಪಟ್ಟಿಯನ್ನು ಈ ಪತ್ರಕ್ಕೆ ಲಗತ್ತಿಸಲಾಗಿದೆ.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಎಲ್ಲಾ www.kseab.karnataka.gov.in ಡೌನ್ಲೋಡ್ ಮಾಡಿಕೊಂಡು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕುರಿತು ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮವಹಿಸಲು ತಿಳಿಸಿದೆ.



