ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಗೆ ರಿಲೀಫ್ ಸಿಕ್ಕಿದ್ದು, ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಕೋರ್ಟ್ ಅನುಮತಿ ನೀಡಿದೆ.
ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ಸಂಬಂಧ ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಇಂದು ವಿಚಾರಣೆ ನಡೆಸಿದೆ. ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಕೋರ್ಟ್ ಅನುಮತಿ ನೀಡಿದೆ.
ಇನ್ನೂ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರವೇ ಗತಿಯಾಗಿದ್ದು, ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಕೋರ್ಟ್ ನಿರಾಕರಿಸಿದೆ.ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಆದೇಶ ಹೊರಡಿಸಿದೆ. ಸದ್ಯಕ್ಕೆ ಬಳ್ಳಾರಿಗೆ ವರ್ಗಾಯಿಸಲು ಸಕಾರಣಗಳಿಲ್ಲ. ಆದರೆ ನಟ ದರ್ಶನ್ ಜೈಲಿನೊಳಗೆ ಓಡಾಡಬಹುದು ಎಂದು ಕೋರ್ಟ್ ಹೇಳಿದೆ.
ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡುವಂತೆ ಕೋರಿ ನಟ ದರ್ಶನ್ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಪರಪ್ಪನ ಅಗ್ರಹಾರದಿಂದ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನಿರಾಕರಿಸಿದೆ. ಜೈಲು ಕೈಪಿಡಿಯಂತೆ ಜೈಲಿನೊಳಗೆ ವಾಕ್ ಮಾಡಬಹುದು ಎಂದು ಹೇಳಿದೆ. ಹಾಗೂ ನಟ ದರ್ಶನ್ ಹಾಸಿಗೆ, ದಿಂಬು ನೀಡಲು ಅನುಮತಿ ನೀಡಿದೆ.