ಬೆಂಗಳೂರು: ವಿಧಾನಪರಿಷತ್ ಸದಸ್ಯರಿಗೂ ಕ್ಷೇತ್ರ ಅಭಿವೃದ್ಧಿಗೆ ಅನುದಾನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಆಡಳಿತ ಪಕ್ಷದ ವಿಧಾನ ಪರಿಷತ್ ಸದಸ್ಯರೊಂದಿಗೆ ಮಂಗಳವಾರ ಸಭೆ ನಡೆಸಿದ ಅವರು, ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಬಜೆಟ್ ನಲ್ಲಿ ಮೀಸಲಿರಿಸಿರುವ 8000 ಕೋಟಿ ರೂ.ನಲ್ಲಿ ವಿಧಾನ ಪರಿಷತ್ ಸದಸ್ಯರಿಗೂ ಅನುದಾನ ಹಂಚಿಕೆ ಮಾಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.
ಶಾಸಕರಿಗೆ ನೀಡಿದಂತೆ ತಮಗೂ ಕ್ಷೇತ್ರದ ಅಭಿವೃದ್ಧಿಗೆ 50 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ವಿಧಾನ ಪರಿಷತ್ ಸದಸ್ಯರು ಮನವಿ ಮಾಡಿದ್ದು, ವಿಶೇಷ ಅನುದಾನ ನೀಡಬೇಕೆಂಬ ವಿಧಾನ ಪರಿಷತ್ ಸದಸ್ಯರ ಬೇಡಿಕೆಯನ್ನು ಪರಿಶೀಲಿಸಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.