HomeLatest NewsGOOD NEWS: ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ನೇಮಕಾತಿಗೆ ಆದೇಶ

GOOD NEWS: ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ನೇಮಕಾತಿಗೆ ಆದೇಶ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನದ 19 ಜಿಲ್ಲಾ ಆಸ್ಪತ್ರೆ ಹಾಗೂ 147 ತಾಲ್ಲೂಕು ಆಸ್ಪತ್ರೆಗಳಲ್ಲಿ  ಸ್ಥಾಪಿಸಲಾದ ತೀವ್ರ ನಿಗಾ ಘಟಕಕ್ಕೆ ತಜ್ಞ ವೈದ್ಯರ ಹುದ್ದೆ ಸೃಜಿಸುವ ಕುರಿತ ಸರ್ಕಾರದ ಆದೇಶ ಹೊರಡಿಸಿದೆ.

ರಾಜ್ಯದ 19 ಜಿಲ್ಲಾ ಆಸ್ಪತ್ರೆ ಮತ್ತು 147 ತಾಲೂಕು ಆಸ್ಪತ್ರೆಗಳಲ್ಲಿ ಸ್ಥಾಪಿಸಿರುವ ತೀವ್ರ ನಿಗಾ ಘಟಕಗಳಿಗೆ ತಜ್ಞ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಅನುಮತಿ ನೀಡಿ ಆದೇಶ ಹೊರಡಿಸಿದೆ.

19 ಜಿಲ್ಲಾ ಆಸ್ಪತ್ರೆಗೆ ಇಬ್ಬರಂತೆ 38 ತಜ್ಞ ವೈದ್ಯರು(ಫಿಜಿಷಿಯನ್/ಅರವಳಿಕೆ ತಜ್ಞರು) ಹಾಗೂ 147 ತಾಲೂಕು ಆಸ್ಪತ್ರೆಗಳಿಗೆ ಒಬ್ಬರಂತೆ 147 ತಜ್ಞ ವೈದ್ಯರು ಸೇರಿ 185 ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಎಸ್. ಪ್ರದೀಪ್ ಕುಮಾರ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿ ಜಿಲ್ಲಾ ಆಸ್ಪತ್ರೆಗೆ 40 ಹಾಸಿಗೆಗಳ ತೀವ್ರ ನಿಗಾ ಘಟಕ ಮತ್ತು ಅದರ ನಿರ್ವಹಣೆಗೆ ಇಬ್ಬರು ತಜ್ಞವೈದ್ಯರು, ಆರು ಮಂದಿ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ, ಆರು ಮಂದಿರ ಶುಶ್ರೂಷಕರು, ಮೂವರು ಡಿ ಗ್ರೂಪ್ ನೌಕರರು ಸೇರಿ 17 ಮಂದಿ ಅಗತ್ಯವಿದೆ. ಪ್ರತಿ ತಾಲೂಕು ಆಸ್ಪತ್ರೆಗೆ 20 ಹಾಸಿಗೆಗಳ ತೀವ್ರ ನಿಗಾ ಘಟಕ ಮತ್ತು ತಜ್ಞ ವೈದ್ಯರು, ನಾಳ್ವರು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ, ನಾಲ್ವರು ಶುಶ್ರೂಷಕರು ಹಾಗೂ ಮೂವರು ಡಿ ಗ್ರೂಪ್ ನೌಕರರು ಸೇರಿ 12 ಮಂದಿಯ ಅಗತ್ಯವಿದೆ. ಈ ಕುರಿತಾಗಿ ಆರೋಗ್ಯ ಇಲಾಖೆಗೆ ಸಲ್ಲಿಸಿದ ಪ್ರಸ್ತಾವನೆಯನ್ನು ಪರಿಶೀಲಿಸಿದ ಆರೋಗ್ಯ ಇಲಾಖೆ ತಜ್ಞ ವೈದ್ಯರ ನೇಮಕಾತಿಗೆ ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular