HomeLatest News'ಭಾರತೀಯ ಸೇನೆ' ಸೇರ ಬಯಸುವವರಿಗೆ ಗುಡ್ ನ್ಯೂಸ್ : 'ಉಚಿತ ಮಾರ್ಗದರ್ಶನ' ಮತ್ತು 'ತರಬೇತಿ'ಗೆ ಅರ್ಜಿ...

‘ಭಾರತೀಯ ಸೇನೆ’ ಸೇರ ಬಯಸುವವರಿಗೆ ಗುಡ್ ನ್ಯೂಸ್ : ‘ಉಚಿತ ಮಾರ್ಗದರ್ಶನ’ ಮತ್ತು ‘ತರಬೇತಿ’ಗೆ ಅರ್ಜಿ ಆಹ್ವಾನ

ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನ 2 ನೇ ತಂಡಕ್ಕಾಗಿ (ಬಾಲಕರಿಗೆ ಮಾತ್ರ) ಆಯ್ಕೆ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಆಯಾ ಜಿಲ್ಲೆಯ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆಯ ಮೂಲಕ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉತ್ತರ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ ನೆಲಮಹಡಿ ಕೊಠಡಿ ಸಂಖ್ಯೆ-1, ಕಾರವಾರ 581301 ಇಲ್ಲಿಗೆ ಅ.03 ರೊಳಗಾಗಿ ಸಲ್ಲಿಸುವುದು.

ಅರ್ಜಿ ಸಲ್ಲಿಸಲು ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಟ ವಾರ್ಷಿಕ ಆದಾಯ ಮಿತಿ ಪ್ರವರ್ಗ-1ಕ್ಕೆ ರೂ.2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ. 1 ಲಕ್ಷ ಒಳಗೊಂಡಿರಬೇಕು. ಅಭ್ಯರ್ಥಿಯು 10 ನೇ ತರಗತಿಯನ್ನು ಉತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಟ 33 ಅಂಕಗಳು ಮತ್ತು ಸರಾಸರಿ ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಂ ಇದ್ದಲ್ಲಿ ಮೇಲ್ಕಂಡತೆ ಸಮಾನವಾದ ಗ್ರೇಡ್ ಪಡೆದಿರಬೇಕು. ಜನ್ಮ ದಿನಾಂಕ ಮತ್ತು ವಯಸ್ಸು 3/10/2025ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯು 3/10/2005 ರಿಂದ 3/10/2008 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು. ಅಭ್ಯರ್ಥಿಗಳಿಗೆ ತರಬೇತಿಯನ್ನು ಕಾರವಾರ ವೀರ ಬಹದ್ದೂರ್ ಹೆಂಜಾ ನಾಯ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯಲ್ಲಿ ನೀಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ದೂ.ಸಂ 08382-226588 ಗೆ ಸಂಪರ್ಕಿಸುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular