ಮಂಡ್ಯ: ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ ಪ್ರಕರಣ ಸಂಬಂಧ ಮತ್ತಷ್ಟು ಆರೋಪಿಗಳ ಗುರುತು ಪತ್ತೆಯಾಗಿದೆ. ಈವರೆಗೆ ಒಟ್ಟು 29 ಆರೋಪಿಗಳ ಗುರುತು ಪತ್ತೆಯಾಗಿದೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.
ಮದ್ದೂರು ಕಲ್ಲು ತೂರಾಟ ಪ್ರಕರಣ ಸಂಬಂಧ ಈಗಾಗಲೇ 22 ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೂ 7 ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ತಿಳಿಸುದರು.
ಮತ್ತೊಂದೆಡೆ ಮದ್ದೂರು ಬೂದಿಮುಚ್ಚಿದ ಕೆಂಡದಂತಿದ್ದು, ಪಟ್ಟಣದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.