HomeLatest Newsರಾಜ್ಯದ ವಿದ್ಯಾರ್ಥಿ'ಗಳಿಗೆ ಗುಡ್ ನ್ಯೂಸ್ : ಅರಿವು ಯೋಜನೆಯಡಿ 1 ಲಕ್ಷ ರೂ. ಶೈಕ್ಷಣಿಕ ಸಾಲ...

ರಾಜ್ಯದ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್ : ಅರಿವು ಯೋಜನೆಯಡಿ 1 ಲಕ್ಷ ರೂ. ಶೈಕ್ಷಣಿಕ ಸಾಲ ಪಡೆಯಲು ಅರ್ಜಿ ಆಹ್ವಾನ.!

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆ:
ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ ಯಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ಒಂದು ರೂ. 1 ಲಕ್ಷ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು.

ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6 ಲಕ್ಷ ಮಿತಿಯೊಳಗಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಮಾನ್ಯ ವರ್ಗದ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು ಮತ್ತು ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವಿರಬೇಕು.ಅರ್ಜಿ ಸಲ್ಲಿಸುವಾಗ ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಹ ಅರ್ಜಿದಾರರನ್ನು ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಶೇಷಚೇತನರಿಗೆ ಶೇ.5 ಮೀಸಲಾತಿ ಇದ್ದು, ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಅರ್ಜಿಗಳನ್ನು ಆನ್ಲೈನ್ ವೆಬ್ಸೈಟ್ http://kacdc.karnataka.gov.in ನಲ್ಲಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ನಗರದ ನೂತನ ಜಿಲ್ಲಾಡಳಿತ ಭವನ ಕಚೇರಿಯ ಎರಡನೇ ಮಹಡಿಯ ಬಿ ಬ್ಲಾಕ್ ನ ಆರ್ಯವೈಶ್ಯ ಅಭಿವೃದ್ಧಿ ನಿಗಮ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ 08392-267038 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular