ಬೆಂಗಳೂರು : ನೇಪಾಳದ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಕನ್ನಡಿಗರೆಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದಾರೆ.
ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ.
You Might Also Like
TAGGED:ಏರ್ಪೋರ್ಟ್