ಬೆಂಗಳೂರು : ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಪ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಮಹಿಳೆಯೊಬ್ಬರು ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಅಲ್ಲಿದ್ದವರು ಅವರನ್ನ ರಕ್ಷಣೆ ಮಾಡಿದ್ದಾರೆ.
ಭೋವಿ, ಕೊರಚ, ಕೊರಮ, ಲಂಬಾಣಿ ಮುಂತಾದ ಸಮುದಾಯಗಳು ವೈಜ್ಞಾನಿಕ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದೆ. ನಾಗಮೋಹನ್ ದಾಸ್ ವರದಿಯ ಪ್ರಕಾರ, ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯ ನಡೆದಿದೆ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.
You Might Also Like
TAGGED:ಒಳಮೀಸಲಾತಿ