HomeLatest Newsಕರಾಮುವಿವಿಯಲ್ಲಿ ಬಿ.ಎಡ್. ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಕರಾಮುವಿವಿಯಲ್ಲಿ ಬಿ.ಎಡ್. ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್. ಕೋರ್ಸಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಪ್ರವೇಶಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿಜ್ಞಾನ/ಸಮಾಜ ವಿಜ್ಞಾನ/ವಾಣಿಜ್ಯ/ಮಾನವೀಯತೆ ವಿಷಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಐವತ್ತು ಪ್ರತಿಶತ ಅಂಕಗಳನ್ನು ಪಡೆದ ಅಭ್ಯರ್ಥಿಗಳು, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ವಿಶೇಷತೆಯೊಂದಿಗೆ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ 55% ಅಂಕಗಳೊಂದಿಗೆ ಪದವಿ ಪಡೆದಿರುವ ಅಭ್ಯರ್ಥಿಗಳು. ಪದವಿ ಜೊತೆಗೆ ಹೆಚ್ಚುವರಿಯಾಗಿ, ಪ್ರಾಥಮಿಕ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ತರಬೇತಿ ಪಡೆದ ಸೇವಾ ಶಿಕ್ಷಕರು. NCTE ಮಾನ್ಯತೆ ಪಡೆದ ಶಿಕ್ಷಕರ ಶಿಕ್ಷಣ ಕಾರ್ಯಕ್ರಮವನ್ನು ಮುಖಾಮುಖಿ ವಿಧಾನದ ಮೂಲಕ ಪೂರ್ಣಗೊಳಿಸಿದ ಅಭ್ಯರ್ಥಿಗಳು (ಮಾನ್ಯತೆ ಪಡೆದ ಶಿಕ್ಷಕರ ಶಿಕ್ಷಣ ಕಾರ್ಯಕ್ರಮ ಎಂದರೆ TCH/D.Ed./D.El.Ed./B.El.Ed./ತತ್ಸಮಾನ). ದೂರಶಿಕ್ಷಣದಲ್ಲಿ ಬಿ.ಎಡ್. ಪ್ರವೇಶಾತಿ ಪಡೆಯಲು ಅರ್ಹತೆ ಹೊಂದಿರುತ್ತಾರೆ.) ಅರ್ಹತೆ ಹೊಂದಿರಬೇಕು.

ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಬಿ.ಎಡ್. ಸಾಮಾನ್ಯ ಪರೀಕ್ಷೆಯನ್ನು ಬರೆಯಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21.09.2025 ಆಗಿರುತ್ತದೆ ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಯು ದಿನಾಂಕ: 28.09.2025 ರಂದು ನಡೆಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26 ಅಥವಾ ಕಛೇರಿ ದೂರವಾಣಿ ಸಂಖ್ಯೆ: 080-26603664 ಹಾಗೂ 9880626439/ 9019526439 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular