ಪ್ಯಾರಿಸ್: ಯುವಜನತೆಯ ಆಕ್ರೋಶದ ಜ್ವಾಲೆಗೆ ಒಂದೆಡೆ ನೇಪಾಳ ಹೊತ್ತಿ ಉರಿಯುತ್ತಿದೆ. ಮತ್ತೊಂದೆಡೆ ಫಾನ್ಸ್ ನಲ್ಲಿಯೂ ಜನಾಕ್ರೋಶ ಆರಂಭವಾಗಿದ್ದು, ಸರ್ಕಾರದ ವಿರುದ್ಧ ಜನರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.
ಸರ್ಕಾರದ ಆರ್ಥಿಕ ನೀತಿ ವಿರೋಧಿಸಿ ರಾಜಧಾನಿ ಪ್ಯಾರಿಸ್ ನಲ್ಲಿ ಜನರು ಪ್ರತಿಭಟನೆ ನಡೆಸುತ್ತಿದ್ದು, ಹಿಂಸಾಚಾರಕ್ಕೆ ತಿರುಗಿದೆ. ಉದ್ರಿಕ್ತರ ಗುಂಪು ವಾಹನಗಳನ್ನು ತಡೆದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದೆ. ತಡೆಯಲು ಬಂದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪೊಲೀಸರು 200ಕ್ಕೂ ಹೆಚ್ಚು ಜನರನ್ನು ಬಂದಿಸಿದ್ದಾರೆ.
ಎಮ್ಯಾನುಯೆಲ್ ಮ್ಯಾಕ್ರನ್ ನೇತೃತ್ವದ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಸಿಡಿದೆದ್ದಿರುವ ಜನರು, ಸರ್ಕಾರ ಜನರ ಜೀವನಮಟ್ಟ ಸುಧಾರಿಸುವಲ್ಲಿ ವಿಫಲವಾಗಿದೆ, ಆರ್ಥಿಕ ನಿರ್ವಣೆಯಲ್ಲಿ ವಿಫಲಾವಾಗಿದೆ ಎಂದು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಸಂಘರ್ಷವೇರ್ಪಟ್ಟಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.