ತುಮಕೂರು: ಗೃಹ ಸಚಿವ ಪರಮೇಶ್ವರ್ ಒಡೆತನದ ಸಿದ್ಧಾರ್ಥ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಕಾರ್ಮಿಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಅಗ್ಳೂರು ಗ್ರಾಮಾಂತರ ಜಿಲ್ಲೆಯ ಟಿ.ಬೇಗೂರಿನಲ್ಲಿ ನಡೆದಿದೆ.
ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ ಕಾರ್ಮಿಕ ತಿಮ್ಮೇಗೌಡ (38) ಆತ್ಮಹತ್ಯೆಗೆ ಶರಣಾದವರು. ತಿಮ್ಮೇಗೌಡ ಆಸ್ಪತ್ರೆಯ ಕೊಠಡಿಯಲ್ಲಿಯೇ ಫ್ಯಾನ್ ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.
ತಿಮ್ಮೇಗೌಡ ಕಳೆದ ೮ ವರ್ಷಗಳಿಂದ ಸಿದ್ಧಾರ್ಥ್ ಮೆಡಿಕಲ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.