BREAKING: ಎಸ್ಸಿ ಒಳ ಮೀಸಲಾತಿಗೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಯತ್ನ: ಬ್ಯಾರಿಕೇಡ್ ಗಳನ್ನು ತಳ್ಳಿ ಪ್ರತಿಭಟನಾಕಾರರ ಆಕ್ರೋಶ

ಬೆಂಗಳೂರು: ಒಳ ಮೀಸಲಾತಿಗಾಗಿ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಕಿಚ್ಚು ತೀವ್ರಸ್ವರೂಪ ಪಡೆದುಕೊಂಡಿದೆ. ಪ್ರತಿಭಟ್ನಾಕಾರರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.

ಎಸ್ ಸಿ ಒಳ ಮೀಸಲಾತಿಗೆ ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಬಂಜಾರ, ಭೋವಿ, ಕೊರಚಿ, ಕೊರಮ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದು, ತಮ್ಮ ಅಹವಾಲು ಆಲಿಸಲು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಥವಾ ಡಿಸಿಎಂ ಡಿ.ಕೆ.ಶಿವಕುಮಾರ್, ಸಂಬಂಧಪಟ್ಟ ಸಚಿವರು ಸ್ಥಳಕ್ಕೆ ಆಗಮಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯ ವೇಳೆ ಹಲವರು ಅಸ್ವಸ್ಥರಾಗಿರುವ ಘಟನೆಯೂ ನಡೆದಿದೆ. ಮಹಿಳೆಯೋರ್ವರು ಡೀಸೆಲ್ ಸುರುದುಕೊಂಡು ಆತ್ಮಹತ್ಯೆಗೂ ಯತ್ನಿಸಿದ ಪ್ರಸಂಗ ನಡೆದಿದೆ. ಪ್ರತಿಭಟನಾ ಸ್ಥಳಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಆಗಮಿಸಿದ್ದರು. ಆದರೆ ಪ್ರತಿಭಟನಾಕಾರರ ರೋಷಾವೇಷ ಕಂಡು ಸಚಿವರು ವಾಪಸ್ ತೆರಳಿದ್ದಾರೆ.

ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿರುವ ಪ್ರತಿಭಟನಾಕಾರರು, ವಿಧಾನಸೌಧ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಬ್ಯಾರಿಕೇಡ್ ಗಳನ್ನು ತಳ್ಳಿ ಅದರ ಮೇಲೆ ಹತ್ತಿ ಮುನ್ನುಗ್ಗಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಹರಸಾಹಸ ಪಟ್ಟಿದ್ದಾರೆ. ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನೂಕಾಟ ತಳ್ಳಾಟ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read