ಶಿವಮೊಗ್ಗ: ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎನ್ನುವ ಹೇಳಿಕೆ ಬಗ್ಗೆ ಶಾಸಕ ಬಿ.ಕೆ. ಸಂಗಮೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ಎಲ್ಲಾ ಧರ್ಮದಲ್ಲಿ ಹುಟ್ಟುವ ಕುರಿತು ನಾನು ಹೇಳಿಕೆ ನೀಡಿದ್ದೆ. ಭಾಷಣದ ಸಂಪೂರ್ಣ ದೃಶ್ಯವನ್ನು ತೋರಿಸಿಲ್ಲ. ನನ್ನ ಹೇಳಿಕೆಯನ್ನು ತೀರಿಸಲಾಗಿದೆ ಎಂದು ಹೇಳಿದ್ದಾರೆ.
ಭದ್ರಾವತಿಯಲ್ಲಿ ಅಶಾಂತಿಗೆ ಬಿಜೆಪಿ, ಜೆಡಿಎಸ್ ಹುನ್ನಾರ ನಡೆಸಿವೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ನವರು ನಿಜವಾದ ಹಿಂದೂಗಳು. ಬಿಜೆಪಿಯವರದು ಬೂಟಾಟಿಕೆಯ ಹಿಂದುತ್ವವಾಗಿದೆ. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುವ ಆಸೆ ಎನ್ನುವ ನನ್ನ ಹೇಳಿಕೆಯನ್ನು ಕೆಲ ಕಿಡಿಗೇಡಿಗಳು ತಿರುಚಿದ್ದಾರೆ. ನನ್ನ ಭಾಷಣವನ್ನು ಸಂಪೂರ್ಣವಾಗಿ ತೋರಿಸಿಲ್ಲ. ವಿಡಿಯೋ ತಿರುಚಲಾಗಿದೆ. ಬಿಜೆಪಿಯವರು ಶಾಂತಿ ಹಾಳು ಮಾಡಲು ಯತ್ನಿಸಿದ್ದಾರೆ. ಭದ್ರಾವತಿಯಲ್ಲಿ ಶಾಂತಿ ಹಾಳಾಗಲು ಬಿಡುವುದಿಲ್ಲ. ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ. ನನ್ನ ಹೇಳಿಕೆ ವೈಯಕ್ತಿಕ ಎಂದು ಹೇಳಿದ್ದಾರೆ.
ದೇಶ ವಿರೋಧಿ ಘೋಷಣೆ ಕೂಗಿದವರಿಗೆ ಬೂಟ್ ನಿಂದ ಒದ್ದು ಒಳಗೆ ಹಾಕಬೇಕು. ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ. ದೇಶದ್ರೋಹಿ ಹೇಳಿಕೆಯನ್ನು ನಾನು ಖಂಡಿಸುತ್ತೇನೆ ಎಂದು ಶಾಸಕ ಬಿ.ಕೆ. ಸಂಗಮೇಶ್ ಹೇಳಿದ್ದಾರೆ.