HomeLatest NewsBIG NEWS: ಅನರ್ಹರ ಬಿಪಿಎಲ್ ಕಾರ್ಡ್ ರದ್ದುಪಡಿಸಿ ಅರ್ಹರಿಗೆ ಹೊಸದಾಗಿ ಕಾರ್ಡ್ ನೀಡಲು ಸಿಎಂ ಸೂಚನೆ

BIG NEWS: ಅನರ್ಹರ ಬಿಪಿಎಲ್ ಕಾರ್ಡ್ ರದ್ದುಪಡಿಸಿ ಅರ್ಹರಿಗೆ ಹೊಸದಾಗಿ ಕಾರ್ಡ್ ನೀಡಲು ಸಿಎಂ ಸೂಚನೆ

ಬೆಂಗಳೂರು: ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿ ಅರ್ಹರಿಗೆ ಹೊಸದಾಗಿ ಕಾರ್ಡ್ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ತಲಾದಾಯದಲ್ಲಿ ದೇಶದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಕರ್ನಾಟಕ ರಾಜ್ಯವಿದ್ದರೂ ಬಿಪಿಎಲ್ ಕಾರ್ಡ್ ಪಡೆದವರು ಶೇಕಡ 80ಕ್ಕೂ ಹೆಚ್ಚು ಕುಟುಂಬಗಳಿವೆ. ಇದು ಗಂಭೀರ ವಿಷಯವಾಗಿದ್ದು, ನಿಯಮಗಳ ಅನ್ವಯ ಅಧಿಕಾರಿಗಳು ಸೂಕ್ಷ್ಮವಾಗಿ ಪರಿಷ್ಕರಣೆ ಮಾಡದಿರುವುದೇ ಇದಕ್ಕೆ ಕಾರಣ ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಹಾರ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಈ ಬಗ್ಗೆ ಸೂಚನೆ ನೀಡಿ, ನೌಕರರು ಸೇರಿ ಅನರ್ಹ ಫಲಾನುಭವಿಗಳನ್ನು ಪತ್ತೆ ಮಾಡಿ ಅಂತಹವರ ಬಿಪಿಎಲ್ ಕಾರ್ಡ್ ರದ್ದುಪಡಿಸಬೇಕು. ಅರ್ಹ ಕುಟುಂಬದವರಿಗೆ ಬಿಪಿಎಲ್ ಕಾರ್ಡ್ ನೀಡಬೇಕು. ತಕ್ಷಣವೇ ಅರ್ಹರಿಗೆ ಬಿಪಿಎಲ್ ಕಾರ್ಡ್ ಕೊಡುವ ಕೆಲಸ ಮಾಡಿ ಎಂದು ತಿಳಿಸಿದ್ದಾರೆ. ಹೊಸ ನ್ಯಾಯಬೆಲೆ ಅಂಗಡಿಗಳ ಹಂಚಿಕೆಯಲ್ಲಿ ಪರಿಶಿಷ್ಟರಿಗೆ ಆದ್ಯತೆ ನೀಡಬೇಕು. ಆಹಾರ ಧಾನ್ಯ ಸರಬರಾಜು ಮಾಡುವ ವಾಹನಗಳಿಗೆ ಜಿಪಿಎಸ್ ಟ್ರ್ಯಾಕ್ ಕಡ್ಡಾಯ ಮಾಡಬೇಕು. ಎಲ್ಲಾ ಗೋದಾಮಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು. ನಿಗಮದಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ತಿಳಿಸಿದ್ದಾರೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular