ಬೆಂಗಳೂರು: ರಾಜೀವ್ ಗಾಂಧಿ ವಸತಿ ನಿಗಮದಿಂದ ಅನುಷ್ಠಾನ ಮಾಡುತ್ತಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ(ಪಿಎಂ ಆವಾಸ್ ಯೋಜನೆ) ಮಂಜೂರಾದ 47,848 ಮನೆಗಳ ಫಲಾನುಭವಿಗಳಿಗೆ ಖುಷಿ ಸುದ್ದಿ ಸಿಕ್ಕಿದೆ.
ಮನೆ ಮಂಜೂರಾದರೂ ಫಲಾನುಭವಿಗಳು ವಂತಿಕೆ ಪಾವತಿಸದ ಹಿನ್ನೆಲೆಯಲ್ಲಿ ಸರ್ಕಾರವೇ ಹುಡ್ಕೋ ನೆರವು ಪಡೆದು ಫಲಾನುಭವಿಗಳಿಗೆ ಕಂತಿನ ಸಾಲ ನೀಡಲು ಮುಂದಾಗಿದೆ. ಈ ಸಂಬಂಧ ಪ್ರಸ್ತಾವನೆ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ವಿವಿಧ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಈ ಬಗ್ಗೆ ಸೂಚನೆ ನೀಡಿದ್ದಾರೆ. ಫಲಾನುಭವಿಗಳಿಗೆ ವಂತಿಗೆ ಪಾವತಿಸುವ ಸಾಮರ್ಥ್ಯವಿಲ್ಲ. ಸಿಬಿಲ್ ಸ್ಕೋರ್ ಇಲ್ಲದ ಕಾರಣಕ್ಕೆ ಬಹಳಷ್ಟು ಮಂದಿಗೆ ಬ್ಯಾಂಕ್ ಸಾಲ ಸಿಗುತ್ತಿಲ್ಲ. ಮನೆ ಹಂಚಿಕೆ ಮಾಡಲು ಸಾಧ್ಯವಾಗುವಂತೆ ಸರ್ಕಾರ ಪಡೆಯುವುದು ಫಲಾನುಭವಿಗಳು ಸಮ ಕಂತುಗಳಲ್ಲಿ ಪಾವತಿಸಬೇಕು ಎಂಬ ಷರತ್ತು ಬದ್ಧವಾಗಿ ಈ ಮೊತ್ತವನ್ನು ಪಾವತಿಸುವ ಪ್ರಸ್ತಾಪಕ್ಕೆ ಸಭೆಯಲ್ಲಿ ಸಹಮತ ವ್ಯಕ್ತವಾಗಿದೆ.