ಚಿಕ್ಕಮಗಳೂರು : ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ನಿಲುವಾಗಿಲು ಗ್ರಾಮದಲ್ಲಿ ನಡೆದಿದೆ.
ಸುಶಾಂತ್ (17) ವರ್ಷದ ಬಾಲಕ ಸೂಸೈಡ್ ಮಾಡಿಕೊಂಡಿದ್ದು, ಈತ ಹರಿಹರಪುರ ಹೋಬಳಿಯ ನಿಲುವಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡ್ತಾಳ್ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.
ಕೊಪ್ಪದ ಜಿಜೆಸಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಹರಿಹರಪುರ ಪೊಲೀಸ್ ಠಾಣಾ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.