ಬೆಂಗಳೂರು: ಬಿಜೆಪಿ ಆಡಳಿತ ಅವಧಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸಲು ಅವಕಾಶ ಕಲ್ಪಿಸಿತ್ತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಬಗ್ಗೆ ಬಿಜೆಪಿ ಅಧಿಕಾರದಲ್ಲಿದ್ದಾಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಬಹುದು ಎಂದು ಕಾನೂನು ತಂದಿದೆ. ಚುನಾವಣಾ ಆಯೋಗದ ಉಪಕಾನೂನಿನಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಲಾಗಿದೆ. ಜಿಬಿಎ ಕಾಯ್ದೆ ಜಾರಿಗೆ ತರುವಾಗ, ಬಿಜೆಪಿ ಮಾಡಿದ್ದ ಕಾಯ್ದೆಯನ್ನೇ ಮುಂದುವರಿಸಿದ್ದೇನೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸುವುದರಲ್ಲಿ ತಪ್ಪೇನು ಇಲ್ಲ. ಈ ವಿಚಾರವಾಗಿ ಕಾನೂನು ಸಚಿವರು ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.
ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ಸೆಂಟ್ ಮೇರಿಸ್ ಹೆಸರಿಡಬೇಕು ಎಂಬ ಸಿಎಂ ಸಿದ್ದರಾಮಯ್ಯ ಅವರ ಪ್ರಸ್ತಾವನೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿರುವ ಬಗ್ಗೆ , ಮೆಟ್ರೋ ನಿಲ್ದಾಣಗಳಿಗೆ ಹೆಸರಿಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸುವುದರಲ್ಲಿ ಯಾವುದೇ ತಪ್ಪಿಲ್ಲ. ಈ ವಿಚಾರವಾಗಿ ನಾವು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದರು.