ಬೆಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿದ್ದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕನನ್ನು ಸೇವೆಯಿಂದ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ.
ರವಿ ವಜಾಗೊಂಡಿರುವ ಬಿಎಂಟಿಸಿ ಬಸ್ ಚಾಲಕ. ರವಿ ಅವರನ್ನು ತಾತ್ಕಾಲಿಕವಾಗಿ ಸೇವೆಯಿಂದ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ.
ಸೆ.೮ರಂದು ಪೀಣ್ಯದಿಂದ ಬಾಣಾವರಕ್ಕೆ ತೆರಳುತ್ತಿದ್ದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ KA-51, AK4276 ಸಂಖ್ಯೆಯ ಬಿಎಂಟಿಸಿ ಬಸ್ ನಲ್ಲಿ ಚಾಲಕ ಹಾಗೂ ಮಹಿಳೆಯ ನಡುವೆ ವಾಗ್ವಾದ ನಡೆದು ಗಲಾಟೆಯಾಗಿದೆ. ಈ ವೇಳೆ ಮಹಿಳೆ ಚಾಲಕನ ಮೇಲೆ ಹೊಡೆಯಲು ಮುಂದಾಗಿದ್ದಾರೆ. ಅಷ್ಟರಲ್ಲಿ ಚಾಲಕ ಮಹಿಳೆಗೆ ಹೊಡೆದಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಬಸ್ ನಿರ್ವಾಹಕ ಜಗಳ ಬಿಡಿಸಲು ಸಾಕಷ್ಟು ಯತ್ನಿಸಿದರೂ ಜಗಳ ವಿಕೋಪಕ್ಕೆ ತಿರುಗಿದೆ. ಯಾವ ಕಾರಣಕ್ಕೆ ಜಗಳ ಶುರುವಾಗಿತ್ತು ಎಂಬುದು ಇನ್ನೂ ತಿಳಿದುಬಂದಿಲ್ಲ.
ಇದೀಗ ಬಸ್ ಚಾಲಕ ರವಿಯನ್ನು ಸೇವೆಯಿಂದ ತಾತ್ಕಾಲಿಕವಾಗಿ ವಜಾಗೊಳಿಸಲಾಗಿದೆ.