ಬೆಂಗಳೂರು: ಇಡಿ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
ಕಾರವಾರ-ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ನಿನ್ನೆಯಷ್ಟೇ ನ್ಯಾಯಾಲಯ ಅವರನ್ನು 2 ದಿನಗಳ ಕಾಲ ಇಡಿ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿತ್ತು. ಆದರೆ ಇಡಿ ಕಸ್ಟಡಿಯಲ್ಲಿದಾಗ ಶಾಸಕರಿಗೆ ಅನಾರೋಗ್ಯ ಹೆಚ್ಚಾಗಿದೆ. ಉಸಿರಾಟದ ತೊಂದರೆ, ಮಧುಮೇಹದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಸತೀಶ್ ಸೈಲ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸತೀಶ್ ಸೈಲ್ ಅವರಿಗೆ 7 ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.