ಬೆಂಗಳೂರು: ವಿಧಾನ ಪರಿಷತ್ ಗೆ ನಾಮನಿರ್ದೇಶನಗೊಂಡಿರುವ ನಾಲ್ವರು ನೂತನ ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದರು.
ಆರತಿ ಕೃಷ್ಣ, ರಮೇಶ್ ಬಾಬು, ಎಫ್.ಹೆಚ್.ಜಕ್ಕಪ್ಪನವರ್ ಹಾಗೂ ಕೆ.ಶಿವಕುಮಾರ್ ವಿಧಾನ ಪರಿಷತ್ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.
ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಪ್ರಮಾಣವಚನ ಬೋಧಿಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.