ಬೆಂಗಳೂರು: ವರ್ಗಾವಣೆ ನೀರಿಕ್ಷೆಯಲ್ಲಿರುವ ಪೊಲೀಸರಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ.ಎ. ಸಲೀಂ ಅವರಿಗೆ ಈ ಬಗ್ಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆಯಲ್ಲಿ 7 ವರ್ಷ ಸೇವಾವಧಿ ಪೂರ್ಣಗೊಳಿಸಿದ ಕಾನ್ಸ್ಟೇಬಲ್ ಮತ್ತು ಹೆಡ್ ಕಾನ್ಸ್ಟೇಬಲ್(ಪತಿ, ಪತ್ನಿ ಪ್ರಕರಣಗಳು) ಅಂತರಜಿಲ್ಲಾ ವರ್ಗಾವಣೆ ಕೋರಿದ್ದಲ್ಲಿ ಅಂತಹ ಪ್ರಕರಣಗಳನ್ನು ಕಡ್ಡಾಯವಾಗಿ ಪರಿಗಣಿಸುವಂತೆ ಸೂಚಿಸಿದ್ದಾರೆ.
ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದು ಪೊಲೀಸ್ ಸಿಬ್ಬಂದಿ ಕೋರಿದ ಜಿಲ್ಲೆಗಳಿಗೆ ಕೂಡಲೇ ವರ್ಗಾವಣೆ ಮಾಡಿ ಕಚೇರಿಗೆ ಮಾಹಿತಿ ನೀಡುವಂತೆ ಗೃಹ ಸಚಿವರು ಆದೇಶಿಸಿದ್ದಾರೆ.